Select Your Language

Notifications

webdunia
webdunia
webdunia
webdunia

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

Ration card

Krishnaveni K

ಬೆಂಗಳೂರು , ಸೋಮವಾರ, 18 ಆಗಸ್ಟ್ 2025 (16:30 IST)
ಬೆಂಗಳೂರು: ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಇಂದು ಸದನದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆಎಚ್ ಮುನಿಯಪ್ಪ ಮಹತ್ವದ ಅಪ್ ಡೇಟ್ ಕೊಟ್ಟಿದ್ದಾರೆ.

ಈಗ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನ ಮುಗಿಯುತ್ತಿದ್ದಂತೇ ರಾಜ್ಯದಲ್ಲಿ ಮತ್ತೆ ಬಿಪಿಎಲ್ ಕಾರ್ಡ್ ಪರಿಷ್ಕರಣೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ. ವಿಧಾನಪರಿಷತ್ ನಲ್ಲಿ ಇಂದು ಪ್ರಶ್ನೋತ್ತರ ವೇಳೆಯಲ್ಲಿ ಪ್ರತಾಪ್ ನಾಯಕ್ ಅವರು ರಾಜ್ಯದಲ್ಲಿ ಹೊಸ ರೇಷನ್ ಕಾರ್ಡ್ ಪಡೆಯಲು ಜನ ಕಷ್ಟಪಡುತ್ತಿದ್ದಾರೆ ಎಂದು ಸಚಿವರ ಗಮನ ಸೆಳೆದರು.

ಈ ವೇಳೆ ಮಾತನಾಡಿದ ಅವರು ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಅಪ್ ಡೇಟ್ ಕೊಟ್ಟಿದ್ದಾರೆ. ರಾಜ್ಯದಲ್ಲಿ 74% ಬಿಎಪಿಲ್ ಕಾರ್ಡ್ ದಾರರಿದ್ದಾರೆ. ಅರ್ಹತೆ ಇಲ್ಲದಿರುವವರ ಕೈಯಲ್ಲೂ ಬಿಪಿಎಲ್ ಕಾರ್ಡ್ ಗಳಿವೆ. ಇದನ್ನೆಲ್ಲಾ ವಿಧಾನ ಮಂಡಲ ಅಧಿವೇಶನದ ಬಳಿಕ ಪರಿಷ್ಕರಣೆ ಮಾಡುತ್ತೇವೆ. ಅನರ್ಹರನ್ನು ಬಿಪಿಎಲ್ ಪಟ್ಟಿಯಿಂದ ಕಿತ್ತು ಹಾಕಿ ಅರ್ಹರಿಗೆ ಬಿಪಿಎಲ್ ಕಾರ್ಡ್ ಸಿಗುವಂತೆ ಮಾಡುತ್ತೇವೆ ಎಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌