Publish Date: Wed, 25 Aug 2021 (10:33 IST)
Updated Date: Wed, 25 Aug 2021 (09:54 IST)
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಆಡಳಿತಕ್ಕೆ ಚುರುಕು ಮುಟ್ಟಿಸಿದ್ದು, ಬಾಕಿ ಉಳಿಸಿಕೊಂಡ ಕಡತ ವಿಲೇವಾರಿಗೆ ಸೂಚನೆ ನೀಡಿದ್ದಾರೆ.
ಸಾರ್ವಜನಿಕರಿಂದ ಸಾಲು ಸಾಲು ದೂರು ಬಂದ ಹಿನ್ನೆಲೆಯಲ್ಲಿ ಒಂದು ವರ್ಷಕ್ಕೂ ಮೇಲ್ಪಟ್ಟ ಕಡತಗಳನ್ನು ಬಾಕಿ ಇಡದಂತೆ ಸಿಎಂ ಬೊಮ್ಮಾಯಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳ ಸೂಚನೆಯ ಡಿಪಿಎಆರ್ ಎಲ್ಲಾ ಇಲಾಖೆಗೆಗಳಿಗೆ ಸುತ್ತೋಲೆ ಹೊರಡಿಸಿದ್ದು, ಬಾಕಿಯಿರುವ ಕಡತಗಳನ್ನು ೩೦ ದಿನದೊಳಗೆ ವಿಲೇವಾರಿ ಮಾಡುವಂತೆ ಸೂಚನೆ ನೀಡಿದ್ದಾರೆ.