Select Your Language

Notifications

webdunia
webdunia
webdunia
webdunia

ರಾಜಕೀಯಕ್ಕೆ ಎಂಟ್ರಿ ಕೊಡಲು ನಿರ್ಧರಿಸಿದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ

ರಾಜಕೀಯಕ್ಕೆ ಎಂಟ್ರಿ ಕೊಡಲು ನಿರ್ಧರಿಸಿದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ
ಬೆಂಗಳೂರು , ಮಂಗಳವಾರ, 28 ಮೇ 2019 (08:04 IST)
ಬೆಂಗಳೂರು : ಕರ್ನಾಟಕದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.



ಇದೀಗ ಬೆಂಗಳೂರು ದಕ್ಷಿಣ ಡಿಸಿಪಿ ಆಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣಾಮಲೈ ಜೂನ್ 4 ರಂದು ರಾಜೀನಾಮೆ ಸಲ್ಲಿಸಲಿದ್ದು, ಈ ಬಗ್ಗೆ ಮೇ 28ರ ಮಂಗಳವಾರ ಸಿಎಂ ಅವರನ್ನು ಭೇಟಿ ಮಾಡಿ ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

 

ತಮಿಳುನಾಡಿನ ಕೊಯಮತ್ತೂರು ಅಣ್ಣಾಮಲೈ ಅವರ ತವರು ಜಿಲ್ಲೆಯಾಗಿದ್ದು, 2021ಕ್ಕೆ ತಮಿಳುನಾಡು ವಿಧಾನಸಭೆಯಲ್ಲಿ ಸ್ಪರ್ಧೆ ಮಾಡುವ ಇಂಗಿತವನ್ನು ಅಣ್ಣಾಮಲೈ ವ್ಯಕ್ತಪಡಿಸಿದ್ದರು. ಈಗ ಕೊಯಮತ್ತೂರು ಕ್ಷೇತ್ರದಿಂದ ಡಿಎಂಕೆ ಅಭ್ಯರ್ಥಿಯಾಗಿ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದಾರೆ. ಇದಕ್ಕೆ ಡಿಎಂಕೆ ಅಧಿನಾಯಕ ಸ್ಟಾಲಿನ್, ಅಣ್ಣಾಮಲೈ ಅವರಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಹುತಾತ್ಮ ಯೋಧರಿಗೆ ವಿನೂತನ ನೃತ್ಯ ನಮನ