Select Your Language

Notifications

webdunia
webdunia
webdunia
webdunia

ಪ್ಲಾಸ್ಟಿಕ್ ಬಳಸದಂತೆ ಖಡಕ್ ಆದೇಶ

plastic
bangalore , ಶನಿವಾರ, 12 ಆಗಸ್ಟ್ 2023 (13:40 IST)
BBMP ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿ BBMP ಆಯುಕ್ತ ತುಷಾರ್ ಗಿರಿನಾಥ್ ಖಡಕ್ ಆದೇಶ ಹೊರಡಿಸಿದ್ದಾರೆ. ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮೇಲಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಪ್ಲಾಸ್ಟಿಕ್ ಬಳಕೆ ನಿಷೇಧ ಕಾಯ್ದೆಯನ್ನ ಜಾರಿಗೆ ತಂದಿದೆ. ಅದನ್ನ ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಆದರೆ ಕೇಂದ್ರದ ಆದೇಶದ ನಡುವೆಯೂ BBMP ಕಚೇರಿಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಹೆಚ್ಚಾಗಿತ್ತು. ಹೀಗಾಗಿ ಕಡ್ಡಾಯವಾಗಿ ಆದೇಶ ಪಾಲನೆ ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್, PVC ಬ್ಯಾನರ್​ಗಳನ್ನ ಬಳಸುವಂತಿಲ್ಲ. ಬದಲಾಗಿ ಬಟ್ಟೆ ಚೀಲ ಹಾಗೂ ಬಟ್ಟೆ ಬ್ಯಾನರ್‌ಗಳನ್ನು ಬಳಸುವಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಪಾಲಿಕೆ ವತಿಯಿಂದ ಧ್ವಜ ಮಾರಾಟ ಮಾಡಲು ಸಿದ್ದತೆ