Select Your Language

Notifications

webdunia
webdunia
webdunia
webdunia

ಅನ್ಯಾಯ ಮಾಡಲು ಹೊರಟ ಸಚಿವ ರೇವಣ್ಣಗೆ ಕೆ.ಆರ್.ಪೇಟೆ ರೈತರಿಂದ ಖಡಕ್ ಎಚ್ಚರಿಕೆ

ಮಂಡ್ಯ
ಮಂಡ್ಯ , ಭಾನುವಾರ, 24 ಫೆಬ್ರವರಿ 2019 (12:15 IST)
ಮಂಡ್ಯ : ಗೊರೂರು ಜಲಾಶಯದಿಂದ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರೇವಣ್ಣ ಅವರಿಗೆ ಕೆ.ಆರ್.ಪೇಟೆ ರೈತರು ಖಡಕ್ ಎಚ್ಚರಿಕೆಯೊಂದನ್ನು ನೀಡಿದ್ದಾರೆ.

ಹೊಳೆನರಸೀಪುರ ರೈತರಿಗೆ ಶ್ರೀರಾಮದೇವರ ಅಣೆಕಟ್ಟೆಯ ನಾಲೆಯ ಮೂಲಕ ನೀರು ಹರಿಸಿ ಬೇಸಿಗೆ ಬೆಳೆ ಬೆಳೆಯಲು ಅನುವು ಮಾಡಿಕೊಟ್ಟಿರುವ ಸಚಿವ ರೇವಣ್ಣ , ಕೆ.ಆರ್.ಪೇಟೆ ತಾಲೂಕಿನ ರೈತರು ಬೆಳೆದಿರುವ ಬೆಳೆಗಳನ್ನು ಉಳಿಸಿಕೊಳ್ಳಲು ನದಿಗೆ ನೀರು ಹರಿಸಲು ಆದೇಶ ನೀಡದೆ ಕೃಷ್ಣರಾಜಪೇಟೆಯ ರೈತರಿಗೆ ಅನ್ಯಾಯ ಮಾಡಲು ಹೊರಟಿದ್ದಾರೆ.


 

ಇದರಿಂದ ಕೋಪಗೊಂಡ ಕೆ.ಆರ್.ಪೇಟೆ ರೈತರು ಕೆ.ಆರ್.ಪೇಟೆ ತಾಲೂಕಿನಲ್ಲಿ ಬೆಳೆದು ನಿಂತಿರುವ ಕಬ್ಬು ಮತ್ತು ಭತ್ತದ ಬೆಳೆಗಳನ್ನು ಉಳಿಸಿಕೊಳ್ಳಲು ಗೊರೂರು ಜಲಾಶಯದಿಂದ ಒಂದು ಸಾವಿರ ಕ್ಯೂಸೆಕ್ ನೀರನ್ನು ಹೇಮಾವತಿ ನದಿಗೆ ಹರಿಸಿ ಎಂದು ಆಗ್ರಹಿಸಿದ್ದಾರೆ.  ಒಂದು ವೇಳೆ ಸೋಮವಾರದ ಒಳಗೆ ಗೊರೂರು ಜಲಾಶಯದಿಂದ ಹೇಮಾವತಿ ನದಿಗೆ ನೀರು ಹರಿಸದಿದ್ದರೆ ಹೊಳೆನರಸೀಪುರದಲ್ಲಿನ ಸಚಿವ ರೇವಣ್ಣ ಅವರ ಮನೆಯ ಮುಂದೆ ವಿಷಕುಡಿದು ಆತ್ಮಹತ್ಯೆ ಮಾಡಿಕೊಳ್ಳುವ ಜೊತೆಗೆ ಗೊರೂರು ಜಲಾಶಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.


 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 


Share this Story:

Follow Webdunia kannada

ಮುಂದಿನ ಸುದ್ದಿ

ಪುಲ್ವಾಮ ದಾಳಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಸ್ಥಿತಿಗೆ ಬಂದಿದೆ ಮೋದಿ ಸರ್ಕಾರ - ವೀರಪ್ಪ ಮೊಯ್ಲಿ