Select Your Language

Notifications

webdunia
webdunia
webdunia
webdunia

ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ವಹಿಸಿದ ಆರೋಪ: ಆಸ್ಪತ್ರೆ ವಿರುದ್ಧ ಕ್ರಮ ಎಂದ ಖಾದರ್

ತುಮಕೂರು
ಗರ್ಭಿಣಿ ಮಹಿಳೆಗೆ ಸೂಕ್ತ ಚಿಕಿತ್ಸೆ ನೀಡದ ಆರೋಪಕ್ಕೆ ಗುರಿಯಾಗಿದ್ದ ಜಿಲ್ಲೆಯ ತಿಪಟೂರು ನಗರದ ಜೇನುಕಲ್ ನರ್ಸಿಂಗ್ ಹೋಂ ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಸೂಕ್ತ ಕ್ರಮ ಕೈಗೊಳ್ಲುವುದಾಗಿ ಸಚಿವ ಯು.ಟಿ.ಖಾದರ್ ಅವರು ಇಂದು ತಿಳಿಸಿದ್ದಾರೆ. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಪ್ರಕರಣವನ್ನು ಕರ್ನಾಟಕ ವೈದ್ಯಕೀಯ ಶಿಕ್ಷಣ ಮಂಡಳಿ ಅದಿಕಾರಿಗಳಿಗೆ ವಹಿಸಲಾಗಿದ್ದು, ಅವರೇ ತನಿಖೆ ನಡೆಸುತ್ತಾರೆ. ಅಲ್ಲದೆ ಸರಿಯಾದ ಚಿಕಿತ್ಸೆ ನೀಡದಿರುವುದೇ ಮಹಿಳೆಯ ತೊಂದರೆಗೆ ಕಾರಣವಾಯಿತು ಎಂದಾದಲ್ಲಿ ಆಸ್ಪತ್ರೆಯ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಲ್ಲದೆ ಆಸ್ಪತ್ರೆಯ ಪರವಾನಿಗೆಯನ್ನೂ ಕೂಡ ರದ್ದುಗೊಳಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. 
 
ಇನ್ನು ಗರ್ಭಿಣಿ ಮಹಿಳೆಯೋರ್ವರು ಇದೇ ನರ್ಸಿಂಗ್ ಹೋಂಗೆ ಆಗಮಿಸಿ ಚಿಕಿತ್ಸೆ ನೀಡುವಂತೆ ಬೇಡಿಕೊಂಡರೂ ಕೂಡ ವೈದ್ಯರು ಚಿಕಿತ್ಸೆ ನೀಡಲು ನಿರಾಕರಿಸಿದ್ದರು. ಬಳಿಕ ಮಹಿಳೆ ಆಸ್ಪತ್ರೆಯ ಆವಱಣದ್ಲಲಿಯೇ ಮಗುವಿಗೆ ಜನ್ಮ ನೀಡಿದ್ದಳು. ಅಲ್ಲದೆ ಮಹಿಳೆ ಕೋಮಾಗೆ ತಲುಪಿದ್ದಳು. ಈ ಹಿನ್ನೆಲೆಯಲ್ಲಿ ಸಚಿವರು ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. 

Share this Story:

Follow Webdunia kannada