ತಾಯಿಯ ಪಕ್ಕದಲ್ಲಿ ಮಲಗಿದ್ದ ಮಗು ಅಪಹರಿಸಿದ ಖದೀಮ

Webdunia
ಭಾನುವಾರ, 28 ಆಗಸ್ಟ್ 2022 (18:04 IST)
ತಾಯಿಯ ಪಕ್ಕದಲ್ಲಿ ಮಲಗಿದ್ದ 7 ತಿಂಗಳ ಮಗುವನ್ನು ವ್ಯಕ್ತಿಯೋರ್ವ ಅಪರಿಸಿರುವ ಘಟನೆ ಮಥುರಾ ರೈಲು ನಿಲ್ದಾಣದ ಪ್ಲಾಟ್‍ಫಾರ್ಮ್‍ನಲ್ಲಿ ನಡೆದಿದೆ. ಪೊಲೀಸರು ಆರೋಪಿಯ ಫೋಟೋವನ್ನು ಸಹ ಬಿಡುಗಡೆ ಮಾಡಿದ್ದು, ಆತನ ಬಗ್ಗೆ ಮಾಹಿತಿ ಗೊತ್ತಾದರೆ ಪೊಲೀಸರಿಗೆ ತಿಳಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಮಥುರಾ ಜೊತೆಗೆ ಉತ್ತರ ಪ್ರದೇಶದ ಅಲಿಗಢ್ ಮತ್ತು ಹತ್ರಾಸ್‍ನಲ್ಲಿ CCTV ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ತನ್ನ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಕದ್ದು ವ್ಯಕ್ತಿ ಎಸ್ಕೇಪ್ ಆಗುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಮೊದಲಿಗೆ ಎಲ್ಲರೂ ಮಲಗಿರುವುದನ್ನು ಗಮನಿಸಿದ ವ್ಯಕ್ತಿ ಒಂದೆರಡು ಬಾರಿ ಸುತ್ತಲೂ ಓಡಾಡಿದ್ದಾನೆ. ನಂತರ ಮತ್ತೆ ಹಿಂದಿರುಗಿ ಬಂದು ಮಗುವನ್ನು ನಿಧನವಾಗಿ ಎತ್ತಿಕೊಂಡು ಅಲ್ಲಿಂದ ಓಡಿ ಹೋಗಿದ್ದಾನೆ.ಇದೀಗ ನಾಪತ್ತೆಯಾಗಿರುವ ಮಗುವನ್ನು ಪತ್ತೆ ಹಚ್ಚಲು ಪೊಲೀಸರು ಹಲವು ತಂಡಗಳನ್ನು ರಚಿಸಿದ್ದಾರೆ. ಅಲ್ಲದೇ ಪ್ರಕರಣ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ GRP ಪೊಲೀಸ್ ಠಾಣೆಯಲ್ಲಿ ಮಥುರಾ ಜೆಎನ್‍ನಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಆರಂಭಿಸಿರುವುದಾಗಿ ಮಥುರಾ ಪೊಲೀಸರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಲಿಬಾಬ 40 ಕಳ್ಳರ ಕತೆಯನ್ನು ಸಿದ್ದರಾಮಯ್ಯ ಸರ್ಕಾರದಲ್ಲೇ ನೋಡ್ತಿದ್ದೇವೆ: ಆರ್ ಅಶೋಕ್

ರಾಹುಲ್ ಗಾಂಧಿ, ಖರ್ಗೆಗೆ ಆಹ್ವಾನವಿಲ್ಲ: ಡಿನ್ನರ್ ಗೆ ಹೋದ ಶಶಿ ತರೂರ್ ಮೇಲೆ ಈಗ ಕಾಂಗ್ರೆಸ್ಸಿಗರ ಸಿಟ್ಟು

ಇಂಡಿಗೋ ವಿಮಾನ ಸಮಸ್ಯೆಯಿಂದ ಸಂಕಷ್ಟಕ್ಕೀಡಾದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸಿದ್ದರಾಮಯ್ಯನವರಿಗೆ ಠಕ್ಕರ್ ಕೊಡಲು ಡಿಕೆ ಶಿವಕುಮಾರ್ ಗೆ ಸಿಕ್ಕಿದೆ ಭರ್ಜರಿ ಅವಕಾಶ

ಸಿದ್ದರಾಮಯ್ಯನವರ ಈ ಗುಟ್ಟು ಹೈಕಮಾಂಡ್ ಗೂ ಗೊತ್ತಿದೆ

ಮುಂದಿನ ಸುದ್ದಿ
Show comments