Publish Date: Wed, 16 Aug 2023 (19:52 IST)
Updated Date: Wed, 16 Aug 2023 (19:56 IST)
ದೇವಸ್ಥಾನದ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ಮಂಡ್ಯದ ಗಾಂಧಿನಗರದ 6ನೇ ಕ್ರಾಸ್ನಲ್ಲಿರುವ ಕಾಳಮ್ಮ ದೇವಸ್ಥಾನದಲ್ಲಿ ನಡೆದಿದೆ. ತಡರಾತ್ರಿ ದೇವಸ್ಥಾನದ ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಹುಂಡಿಯನ್ನ ಕದ್ದೊಯ್ದಿದ್ದಾರೆ. ಹುಂಡಿಯಲ್ಲಿದ್ದ ಸುಮಾರು 1.50 ಲಕ್ಷ ಹಣವನ್ನ ದೋಚಿ ಹುಂಡಿ ಎಸೆದು ಖದೀಮರು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಮಂಡ್ಯ ಪಶ್ಚಿಮ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.