Publish Date: Sat, 06 May 2023 (15:45 IST)
Updated Date: Sat, 06 May 2023 (17:34 IST)
ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿನಲ್ಲಿ ರೋಡ್ ಶೋ ನಡೆಸಿದ್ದು, ರೋಡ್ ಶೋ ಹಿನ್ನೆಲೆ ಬೆಂಗಳೂರಿನಲ್ಲಿ ಖಾಕಿ ಫುಲ್ ಬಂದೋಬಸ್ತ್ ಕೈಗೊಂಡಿತ್ತು.. ಪೊಲೀಸ್ ಆಯುಕ್ತರಿಂದ ಎಲ್ಲಾ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿತ್ತು.ಟ್ರಾಫಿಕ್ ಸ್ಪೆಷಲ್ ಕಮಿಷನರ್ ಸಲೀಂಗೂ ಭದ್ರತಾ ಜವಾಬ್ದಾರಿ ನೀಡಲಾಗಿದ್ದು, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 10 ಡಿಸಿಪಿಗಳನ್ನು ನಿಯೋಜನೆ ಮಾಡಲಾಗಿತ್ತು.. ಸುಮಾರು 8 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದ್ದು, ನಾಲ್ಕು ವಿಭಾಗಗಳಾಗಿ ಭದ್ರತೆ ಕೈಗೊಳ್ಳಲಾಗಿತ್ತು.. ರೋಡ್ ಶೋ ಸಾಗುವ ಮಾರ್ಗಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ರು.