Publish Date: Thu, 18 Dec 2025 (17:24 IST)
Updated Date: Thu, 18 Dec 2025 (17:27 IST)
ಉಜಿರೆ (ದಕ್ಷಿಣ ಕನ್ನಡ): ಪುತ್ತೂರು ಉಪ ವಿಭಾಗಾಧಿಕಾರಿ ಎರಡನೇ ಬಾರಿಗೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶವನ್ನು ತಿಮರೋಡಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಮರುಪರಿಶೀಲಿಸಲು ಹೈಕೋರ್ಟ್ ಸೂಚಿಸಿತ್ತು.
ಇದೀಗ ಹೈಕೋರ್ಟ್ ಆದೇಶದಂತೆ ಮರುಪರಿಶೀಲನೆ ಮಾಡಿ ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡಿ ಡಿ.17ರಂದು ಆದೇಶ ಹೊರಡಿಸಲಾಗಿದೆ.
ಗಡಿಪಾರು ಆದೇಶ ಪ್ರತಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದಿದ್ದು.
ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗೆ ಗುರುವಾರ ಪೊಲೀಸರು ನೋಟಿಸ್ ಜಾರಿಗೆ ಹೋದಾಗ ಅವರು ಮನೆಯಲ್ಲಿ ಪತ್ತೆಯಾಗಲಿಲ್ಲ.