Publish Date: Tue, 17 Jan 2023 (19:40 IST)
Updated Date: Tue, 17 Jan 2023 (19:45 IST)
ಹೊಸಪೇಟೆಯಲ್ಲಿ ಕಾಂಗ್ರೆಸ್ ಕೈಗೊಂಡಿರುವ ಪ್ರಜಾಧ್ವನಿ ರಥಯಾತ್ರೆಯಲ್ಲಿ ಸಚಿವ ಆನಂದ್ ಸಿಂಗ್ರನ್ನ ಈಶ್ವರ್ ಖಂಡ್ರೆ ಟೀಕಿಸಿದ್ದಾರೆ. 'ಯಾವ ಪಕ್ಷದಿಂದ ಗೆದ್ದಿದ್ದಾರೆ ಅದರ ಬೆನ್ನಿಗೆ ಚೂರಿ ಹಾಕಿದ್ದಾರೆ. ನಿಮ್ಮ ಕ್ಷೇತ್ರದ ಶಾಸಕರೇ ಮಾರಾಟ ಆಗಿದ್ದಾರೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ಹೆಸರು ಹೇಳದೆ ಟೀಕಿಸಿದರು. ಇಲ್ಲಿ ಮಂಗಳವಾರ ಏರ್ಪಡಿಸಿರುವ ಪ್ರಜಾ ಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷವು ಆಪರೇಷನ್ ಕಮಲದ ಮೂಲಕ ಶಾಸಕರನ್ನು ಖರೀದಿಸಿ ರಾಜ್ಯದಲ್ಲಿ ಸರ್ಕಾರ ಮಾಡಿದೆ. ನಿಮ್ಮ ಕ್ಷೇತ್ರದ ಶಾಸಕರೇ ಮಾರಾಟ ಆಗಿದ್ದಾರೆ. ಇವರನ್ನು ಮನೆಗೆ ಕಳಿಸಬೇಕಲ್ಲವೇ? ಎಂದು ಪ್ರಶ್ನಿಸಿದರು. ಬಿಜೆಪಿ ಸರ್ಕಾರ ಬಂದ ನಂತರ ರಾಜ್ಯದಲ್ಲಿ ಪ್ರತಿಯೊಂದರಲ್ಲೂ ಹಗರಣಗಳು ನಡೆದಿವೆ. ಜಾತಿ, ಧರ್ಮದ ಹೆಸರಲ್ಲಿ ಜನರನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಸತತ ಅಪ ಪ್ರಚಾರ ಮಾಡುತ್ತಿದ್ದಾರೆ. ಆದರೆ, ಈ ಚುನಾವಣೆಯಲ್ಲಿ ಅವರು ಸೋಲುವುದು ಖಚಿತ ಎಂದು ಹೇಳಿದರು.