Select Your Language

Notifications

webdunia
webdunia
webdunia
webdunia

ಪ್ರಧಾನಿ ಜೀವಕ್ಕೆ ಬೆದರಿಕೆ ಇದೆ ಅಂದ್ಮೇಲೆ ನಮ್ಮ ಗತಿ?: ಖರ್ಗೆ

ಪ್ರಧಾನಿ ಜೀವಕ್ಕೆ ಬೆದರಿಕೆ ಇದೆ ಅಂದ್ಮೇಲೆ ನಮ್ಮ ಗತಿ?: ಖರ್ಗೆ
ಬೆಂಗಳೂರು , ಭಾನುವಾರ, 25 ಡಿಸೆಂಬರ್ 2016 (18:05 IST)
ನನ್ನ ಜೀವಕ್ಕೆ ಬೆದರಿಕೆ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಪ್ರಧಾನಿ ಜೀವಕ್ಕೆ ಬೆದರಿಕೆ ಇದೆ ಅಂದ್ಮೇಲೆ ನಮ್ಮ ಗತಿ ಏನು ಎಂದು ಪ್ರಶ್ನಿಸಿದ್ದಾರೆ.
 
ಕಲಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಹುದ್ದೆಯಲ್ಲಿರುವವರು ಬಹಿರಂಗವಾಗಿಯೇ ನನ್ನ ಜೀವಕ್ಕೆ ಬೆದರಿಕೆ ಇದೆ ಎಂದು ಕಣ್ಣೀರಿಟ್ಟು ಹೇಳಿದರೆ ಜಗತ್ತಿಗೆ ಯಾವ ರೀತಿಯ ಸಂದೇಶ ರವಾನೆಯಾಗುತ್ತದೆ ಎಂದು ಕಿಡಿಕಾರಿದರು.
 
ಪೂರ್ವ ಚಿಂತನೆ ಇಲ್ಲದೆ ಏಕಾಏಕಿ 500, 1000 ಮುಖಬೆಲೆಯ ನೋಟು ನಿಷೇಧ ಮಾಡಿದ್ದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರದಿಂದ ಎಟಿಎಂ ಕೇಂದ್ರಗಳ ಮುಂದೆ ನಿಂತ 108 ಜನ ಸಾವನ್ನಪ್ಪಿದ್ದಾರೆ. ಈ ಸಾವಿಗೆ ಪ್ರಧಾನಿ ಅವರೆ ನೇರ ಹೊಣೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬರ ಅಧ್ಯಯನ ಪ್ರವಾಸ: ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ಕಿಡಿ