Publish Date: Tue, 17 Apr 2018 (08:48 IST)
Updated Date: Tue, 17 Apr 2018 (08:50 IST)
ಶಿವಮೊಗ್ಗ: ಮುಂಬರುವ ವಿಧಾನಸಭೆ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನಾಯಕರೇ ಸೋಲಿಸಲಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ.
ಕಳೆದ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ಸ್ಪರ್ಧಿಸಿದ್ದ ಜಿ ಪರಮೇಶ್ವರ್ ಸೋಲಿಗೆ ಸಿಎಂ ಸಿದ್ದರಾಮಯ್ಯ ಕಾರಣರಾಗಿದ್ದರು. ಈ ಬಾರಿ ಚುನಾವಣೆಯಲ್ಲಿ ಪರಮೇಶ್ವರ್ ಆ ಸೋಲಿಗೆ ಸೇಡು ತೀರಿಸಿಕೊಳ್ಳಲಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಸಿಎಂ ಸೋಲಿಗೆ ಬೇರೆ ಯಾರೂ ಬೇಕಾಗಿಲ್ಲ. ಕಾಂಗ್ರೆಸ್ ನವರೇ ಆದ ಮಲ್ಲಿಕಾರ್ಜುನ ಖರ್ಗೆ, ಜಿ ಪರಮೇಶ್ವರ್ ಅವರೇ ಸಾಕು ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.