Webdunia - Bharat's app for daily news and videos

Install App

ಹನಿಟ್ರ್ಯಾಪ್ ಬಿರುಗಾಳಿ ಮಧ್ಯೆ ಸಿದ್ದರಾಮಯ್ಯ ಭೇಟಿಯಾದ ಖರ್ಗೆ: ರಾಜಕೀಯದಲ್ಲಿ ಹೆಚ್ಚಿದ ಕುತೂಹಲ

Sampriya
ಭಾನುವಾರ, 23 ಮಾರ್ಚ್ 2025 (14:00 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್‌ ಬಿರುಗಾಳಿ ಎದ್ದಿರುವ ಬೆನ್ನಲ್ಲೆ ಮುಖ್ಯಮಂತ್ರಿಗಳ ಕಾವೇರಿ ನಿವಾಸಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವುದು ಭಾರೀ ಕುತೂಹಲ ಕೆರಳಿಸಿದೆ.

ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಹನಿಟ್ರ್ಯಾಪ್ ಯತ್ನ ಭಾರೀ ಸದ್ದು ಮಾಡುತ್ತಿದೆ.ಈ ಪ್ರಕರಣ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಈ ಬಗ್ಗೆ ಹೈಕಮಾಂಡ್​ಗೆ ದೂರು ನೀಡಲು ರಾಜಣ್ಣ ತೀರ್ಮಾನಿಸಿದ್ದಾರೆ. ಅದರ ಬೆನ್ನಲ್ಲೇ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಖುದ್ದಾಗಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ.

ಇಂದು ಮಲ್ಲಿಕಾರ್ಜುನ ಖರ್ಗೆ ಅವರು ಮೊಣಕಾಲು ನೋವಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದೇ ನೆಪದಲ್ಲಿ ರಾಜಣ್ಣ ಅವರ ಹನಿಟ್ರ್ಯಾಪ್​ ಆರೋಪದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ದೇಶದಾದ್ಯಂತ ಸದ್ದು ಮಾಡಿರುವ ಹನಿಟ್ರಾಪ್‌ ವಿಚಾರದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಂದ ದೂರವಾಣಿ ಮೂಲಕ ಮಾಹಿತಿ ಪಡೆದಿದೆ. ಆದರೂ ಸಹ ಎಐಸಿಸಿ ಅಧ್ಯಕ್ಷರು ಸಿಎಂ ಹನಿಟ್ರ್ಯಾಪ್​ ಬಗ್ಗೆ ಸುದೀರ್ಘವಾಗಿ 45 ನಿಮಿಷಗಳ ಮಹತ್ವದ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿ.ಕೆ. ಸುರೇಶ್‌ಗೆ ಇಡಿ ಶಾಕ್‌: ಐಶ್ವರ್ಯ ಗೌಡ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌

ತಂದೆಯ ನಿರ್ಲಕ್ಷ್ಯಕ್ಕೆ ಮಗು ಬಲಿ: ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ ಕಂದಮ್ಮ ಸಾವು

ಸಿಎಂ ಮನೆಗೆ ಮುತ್ತಿಗೆ ಹಾಕಲೆತ್ನಿಸಿದ ಬಿಜೆಪಿ ನಾಯಕರ ಬಂಧನ

ವಿಮಾನ ದುರಂತ: 135 ಮೃತದೇಹಗಳ ಗುರುತು ಪತ್ತೆ, ಇನ್ನೂ 135 ಶವಗಳ ಗುರುತು ಪತ್ತೆಗಾಗಿ ಪ್ರಕ್ರಿಯೆ ಚುರುಕು

ಗೋದ್ರಾ ದುರಂತದಲ್ಲಿ ಸತ್ರು, ಕುಂಬಮೇಳದಲ್ಲಿ ಸತ್ರು ಮೋದಿ ರಾಜೀನಾಮೆ ಕೇಳಿದ್ವಾ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments