Publish Date: Wed, 28 Dec 2022 (14:28 IST)
Updated Date: Wed, 28 Dec 2022 (14:32 IST)
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ವಾಹನ ಕಳ್ಳರ ಹಾವಳಿ ಹೆಚ್ಚಾಗಿದೆ. ಪೊಲೀಸರು ಎಷ್ಟೇ ಅಲರ್ಟ್ ಆಗಿದ್ರೂ, ಕಳ್ಳರ ಕೈಚಳಕ ಮಾತ್ರ ನಿಲ್ಲುತ್ತಿಲ್ಲ. ದ್ವಿಚಕ್ರ ವಾಹನಗಳನ್ನ ಕಳತನ ಮಾಡ್ತಿದ್ದ ಇಬ್ಬರು ಆರೋಪಿಗಳನ್ನ ಬೆಂಗಳೂರಿನ ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.. ಚಂದ್ರಪ್ಪ, ರವಿಕುಮಾರ್ ಬಂಧಿತ ಆರೋಪಿಗಳಾಗಿದ್ದು, ಖತರ್ನಾಕ್ ಖದೀಮರಿಂದ ನಾಲ್ಕು ಲಕ್ಷ ಬೆಲೆ ಬಾಳುವ ಆರು ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ. ಇನ್ನು, ಪ್ರಮುಖ ಆರೋಪಿ ಮಂಜುನಾಥ್ಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದು, ಈ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.