ಇಂದು ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ?

Webdunia
ಬುಧವಾರ, 5 ಏಪ್ರಿಲ್ 2023 (11:42 IST)
ಕಿಚ್ಚ ಸುದೀಪ್ ಇಂದು ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ ಎನ್ನುವ ವಿಚಾರ ರಾಜಕೀಯದ ಪಡಸಾಲೆಯಲ್ಲಿ ಗಿರಕಿ ಹೊಡೆಯುತ್ತಿದೆ. ಇಂದು ಮಧ್ಯಾಹ್ನ 1.30ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸುದೀಪ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಅವರನ್ನು ಬರಮಾಡಿಕೊಳ್ಳಲು ಸರ್ವ ರೀತಿಯಲ್ಲೂ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗುತ್ತಿದೆ.
 
ಈ ಕುರಿತು ಸುದೀಪ್ ಯಾವುದೇ ಹೇಳಿಕೆಯನ್ನು ನೀಡದೇ ಇದ್ದರೂ, ಸುದೀಪ್ ಅವರ ಆಪ್ತರು ಹೇಳುವ ಪ್ರಕಾರ  ಕಿಚ್ಚ ಬಿಜೆಪಿಗೆ ಬರುವುದು ಕನ್ಫರ್ಮ್. ಆದರೆ, ಸ್ಟಾರ್ ಪ್ರಚಾರಕರಾಗಿ ಬರಲಿದ್ದಾರಾ ಅಥವಾ ಅಧಿಕೃತವಾಗಿ ಪಕ್ಷವನ್ನು ಸೇರುತ್ತಿದ್ದಾರೆ ಎನ್ನುವ ಗೊಂದಲವಿದೆ. ಈ ಗೊಂದಲಕ್ಕೆ ಮಧ್ಯಾಹ್ನ ತೆರೆಬೀಳಲಿದೆ. 

ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕ ರಾಜುಗೌಡ, ‘ಸುದೀಪ್ ನನ್ನ ಸಹೋದರನಿದ್ದಂತೆ. ಅವರೊಂದಿಗೆ ಸಾಕಷ್ಟು ಒಡನಾಟ ಹೊಂದಿದ್ದೇನೆ. ಎರಡ್ಮೂರು ಬಾರಿ ನಾನು ಕೂಡ ಬಿಜೆಪಿಗೆ ಸೇರುವಂತೆ ಅವರೊಂದಿಗೆ ಮಾತನಾಡಿದ್ದೇನೆ. ಆದರೆ, ಅವರು ಸ್ಪಷ್ಟ ಅಭಿಪ್ರಾಯವನ್ನು ವ್ಯಕ್ತ ಪಡಿಸಿರಲಿಲ್ಲ. ಇಂದು ಮಾಧ್ಯಮಗಳಲ್ಲಿ ಸುದ್ದಿ ನೋಡಿ, ನಾನೇ ಅವರಿಗೆ ಬೆಳಗ್ಗೆ ಫೋನ್ ಮಾಡಿದ್ದೆ. ಒಂದು ರೀತಿಯಲ್ಲಿ ಸಸ್ಪನ್ಸ್ ಸಿನಿಮಾದಂತೆ ಆ ವಿಷಯವನ್ನು ಇಟ್ಟಿದ್ದಾರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ: ಎಚ್ ವಿಶ್ವನಾಥ್ ಹೊಸ ಬಾಂಬ್

ಎಟಿಎಂ ವ್ಯಾನ್‌ನ 7.11 ಕೋಟಿ ದರೋಡೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಜೆಡಿಎಸ್‌ಗೆ 25 ವರ್ಷಗಳ ಸಂಭ್ರಮ, ಶಾಲು ತಿರುಗಿಸಿ ದೇವೇಗೌಡರ ಸಂಭ್ರಮ

ಐಎಸ್‌ಐ ಜತೆ ನಂಟು ಬೆಳೆಸಿ ಖತರ್ನಾಕ್ ಕೆಲಸ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್‌

ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments