Select Your Language

Notifications

webdunia
webdunia
webdunia
webdunia

ಎಬಿವಿಪಿ ಸಂಘಟನೆಯ ವಿರುದ್ಧ ಕಿಡ್ನಾಪ್ ಕೇಸ್

ಎಬಿವಿಪಿ ಸಂಘಟನೆಯ ವಿರುದ್ಧ ಕಿಡ್ನಾಪ್ ಕೇಸ್
ಬೆಂಗಳೂರು , ಶನಿವಾರ, 20 ಆಗಸ್ಟ್ 2016 (12:31 IST)
ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿರುವ ಎಬಿವಿಪಿ ಸಂಘಟನೆಯ ವಿರುದ್ಧ ಕಿಡ್ನಾಪ್ ಕೇಸ್ ದಾಖಲಾಗಿದೆ.
 
ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಿ ಅವರನ್ನು ಬಲವಂತವಾಗಿ ಪ್ರತಿಭಟನೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿ ರಾಜಾಜಿನಗರದಲ್ಲಿರುವ ಕೆಟಿಎಸ್‌ವಿ ಖಾಸಗಿ ಕಾಲೇಜಿನ ಪ್ರಾಂಶುಪಾಲ ಶ್ರೀಕಾಂತ್ ಮಾಗಡಿ ರಸ್ತೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. 
 
ಬೆಂಗಳೂರಿನ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಅಮ್ನೆಸ್ಟಿ ಇಂಡಿಯಾ ಸಂಸ್ಥೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ್ದರು. 
 
ಸೇನೆಯ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿರುವುದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರು ಅಸಹಕಾರ ಪ್ರತಿಭಟನೆ ಕೈಗೊಂಡಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಯಡಿಯೂರಪ್ಪ, ಈಶ್ವರಪ್ಪ ಜಟಾಪಟಿಗೆ ಹೈಕಮಾಂಡ್ ಗರಂ: ದೆಹಲಿಗೆ ಬುಲಾವ್