Webdunia - Bharat's app for daily news and videos

Install App

ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಭವಾನಿ ರೇವಣ್ಣ

sampriya
ಸೋಮವಾರ, 3 ಜೂನ್ 2024 (14:39 IST)
ಬೆಂಗಳೂರು: ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ನೀಡಿದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನಿಗಾಗಿ ಮತ್ತೆ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಭವಾನಿ ರೇವಣ್ಣ ಪರ ವಕೀಲ ಗಿರೀಶ್ ಕುಮಾರ್ ಬಿ.ಎಂ. ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಕೇಸ್ ಸ್ವೀಕರಿಸಿ ಕೋರ್ಟ್‌ ಎಫ್ಆರ್ ನಂಬರ್ ನೀಡಿದೆ. ಇನ್ನು ಕೇಸ್ ನಂಬರ್ ನೀಡಿದ ಬಳಿಕ ಪೀಠಕ್ಕೆ ಅರ್ಜಿ ರವಾನೆಯಾಗುತ್ತದೆ. ಸೋಮವಾರ ಬೆಳಗ್ಗೆ 11:30ಕ್ಕೆ ಭವಾನಿ ರೇವಣ್ಣ ಪರ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ಭವಾನಿ ಅವರನ್ನು ವಶಕ್ಕೆ ಪಡೆಯಲು ಪೊಲೀಸರ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ. ಅವರ ವಿರುದ್ಧ ಅರೆಸ್ಟ್ ವಾರಂಟ್ ಕೂಡ ಜಾರಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಪೊಲೀಸರ ನಾಲ್ಕು ವಿಶೇಷ ತಂಡಗಳಿಂದ ಭವಾನಿ ರೇವಣ್ಣಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಬೆಂಗಳೂರು, ಮೈಸೂರು, ಹಾಸನ ಈ ಮೂರು ಜಿಲ್ಲೆಗಳಲ್ಲಿ ಭವಾನಿ ರೇವಣ್ಣಗಾಗಿ ಮುಖ್ಯವಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಮೂರು ಜಿಲ್ಲೆಗಳಲ್ಲಿ ಮೂರು ಪೊಲೀಸ್ ತಂಡಗಳು ಬೀಡುಬಿಟ್ಟಿವೆ

ಭವಾನಿ ರೇವಣ್ಣ ಎಲ್ಲಿದ್ದಾರೆ ಎಂಬ ಮಾಹಿತಿ ಕಲೆ‌ ಹಾಕುತ್ತಿರುವ ಎಸ್‌ಐಟಿ ಯಾವುದೇ ಕ್ಷಣದಲ್ಲಿ ಅವರನ್ನು ಬಂಧಿಸುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಂಬೂಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ: ಅಂಬಾರಿಯಲ್ಲಿ ವಿರಾಜಮಾನಳಾದ ನಾಡ ಅಧಿದೇವತೆ

ವಿಶ್ವವಿಖ್ಯಾತ ಜಂಬೂಸವಾರಿ: ಮೆರವಣಿಗೆಯಲ್ಲಿ 58 ಸ್ತಬ್ಧಚಿತ್ರ, ನೂರಾರು ಕಲಾತಂಡಗಳು ಭಾಗಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ: ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವೆಂಬರ್ ಕ್ರಾಂತಿ ಇಲ್ಲ, ಬರೀ ಬ್ರಾಂತಿ ಅಷ್ಟೇ: ಸಿಎಂ ಬದಲಾವಣೆ ಬಗ್ಗೆ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ

ಗ್ಯಾರಂಟಿ ಹಣದಲ್ಲಿ ವಾಷಿಂಗ್ ಮಷಿನ್ ಖರೀದಿಸಿ ಮಹಿಳೆ ಪೂಜೆ: ವಿಡಿಯೊ ಹಂಚಿ ಸಿದ್ದರಾಮಯ್ಯ ಸಂತಸ

ಮುಂದಿನ ಸುದ್ದಿ