Select Your Language

Notifications

webdunia
webdunia
webdunia
webdunia

ಸಂತ್ರಸ್ತೆಯ ಅಪಹರಣ: ರೇವಣ್ಣ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್‌

Revanna

Sampriya

ಬೆಂಗಳೂರು , ಬುಧವಾರ, 8 ಮೇ 2024 (16:10 IST)
ಬೆಂಗಳೂರು: ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಸ್‌ಐಟಿ ವಶದಲ್ಲಿದ್ದ  ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಮೇ 14ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.

ಅದರಂತೆ ಇದೀಗ ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಕರೆದೊಯ್ದರು.

ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದ ರೇವಣ್ಣ ಅವರನ್ನು ಅವಧಿ ಮುಗಿದಿದ್ದರಿಂದ  ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಎಸ್​ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದು, ರೇವಣ್ಣ ಆಪ್ತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕುಮಾರಸ್ವಾಮಿಗೆ ಬ್ಯಾಕ್‌ ಮೇಲ್ ಮಾಡುವುದೇ ಕಾಯಕ: ಶಿವಕುಮಾರ್ ಆರೋಪ