50 ರೂಪಾಯಿಗಾಗಿ ಸ್ನೇಹಿತನನ್ನೇ ಕೊಲೆ!

Webdunia
ಬುಧವಾರ, 22 ಜೂನ್ 2022 (12:33 IST)
ಬೆಂಗಳೂರು : ಕೇವಲ 50 ರೂ.ಗಾಗಿ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರದ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕುರಬರಹಳ್ಳಿ ಸರ್ಕಲ್ ಬಳಿ ನಡೆದಿದೆ.

ಯುವಕ ಶಿವಮಾಧು(24)ನನ್ನು ಆತನ ಸ್ನೇಹಿತ ಶಾಂತಕುಮಾರ್ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಕೊಲೆಯಾದ ಶಿವಮಾಧು ಹಾಗೂ ಆರೋಪಿ ಶಾಂತಕುಮಾರ್ ಇಬ್ಬರೂ ಸ್ನೇಹಿತರು.

ಚಿಕ್ಕಂದಿನಿಂದ ಆಡಿ ಬೆಳೆದವರು. ಕುರಬರಹಳ್ಳಿ ಸರ್ಕಲ್ ಬಳಿ ಹುಟ್ಟಿ ಬೆಳೆದವರು ಕೆಲ ವರ್ಷಗಳ ಹಿಂದೆ ಲಗ್ಗೆರೆ ಬ್ರಿಡ್ಜ್ ಬಳಿ ಶಿಫ್ಟ್ ಆಗಿದ್ದರು. ಆದರೂ ಹಳೆ ಅಡ್ಡ ಎಂದು ಆಗಾಗ ಕುರುಬರಹಳ್ಳಿ ಕಡೆ ಬರುತ್ತಿದ್ದರು. 

ಆರೋಪಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದರೆ, ಮೃತ ಶಿವಮಾಧು ಆಟೋ ಡ್ರೈವರ್ ಆಗಿದ್ದ. ಎಂದಿನಂತೆ ಕುರಬರಹಳ್ಳಿ ಸರ್ಕಲ್ ಕಡೆ ಬಂದಿದ್ದ ಶಿವಮಾಧು, ಶಾಂತಕುಮಾರ್ ಮತ್ತು ಸ್ನೇಹಿತರು ಹತ್ತಿರದಲ್ಲೇ ಇದ್ದ ಗ್ರೌಂಡ್ಗೆ ಕ್ರಿಕೆಟ್ ಆಡಲು ಹೋಗಿದ್ದರು. ಕ್ರಿಕೆಟ್ ಆಡಿ ಬಂದವರೇ ಏನೋ ಕೆಲಸಕ್ಕೆ ರಾತ್ರಿ 8:30ರ ಸುಮಾರಿಗೆ ಸರ್ಕಲ್ ಬಳಿ ಇರುವ ಸೈಬರ್ ಸೆಂಟರ್ಗೂ ಹೋಗಿದ್ದರು.

ಈ ವೇಳೆ ಶಾಂತಕುಮಾರ್ ಜೇಬಿನಿಂದ ಶಿವಮಾಧು 50 ರೂ. ತೆಗೆದಿದ್ದಾನೆ. ಯಾಕೋ 50 ರೂ. ತಗೊಂಡೆ? ವಾಪಸ್ ಕೊಡು ಎಂದು ಕೇಳಿದ್ದ ಶಾಂತಕುಮಾರ್ಗೆ ಶಿವಮಾಧು ಕೊಡಲ್ಲ ಎಂದಿದ್ದಾನೆ.

ಈ ವೇಳೆ ಇಬ್ಬರ ಮಧ್ಯೆ ಜಗಳವಾಗಿದ್ದು, ಜೊತೆಯಲ್ಲೇ ತಂದಿದ್ದ ಚಾಕು ತೆಗೆದುಕೊಂಡು ಶಾಂತಕುಮಾರ್ ಶಿವಮಾಧು ಎದೆಗೆ ಚುಚ್ಚಿ ಎಸ್ಕೇಪ್ ಆಗಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಿದ್ದಿದ್ದ ಶಿವಮಾಧುನನ್ನು ಸ್ನೇಹಿತರು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೂ ಆತ ತೀವ್ರ ಗಾಯಗಳಿಂದ ಸಾವನ್ನಪ್ಪಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments