ಓರ್ವ ಭಯೋತ್ಪಾದಕನ ಹತ್ಯೆ

Webdunia
ಶುಕ್ರವಾರ, 11 ನವೆಂಬರ್ 2022 (18:09 IST)
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್​​ನಲ್ಲಿ ಭಾರತೀಯ ಸೇನಾಪಡೆ ಎನ್ ಕೌಂಟರ್ ನಡೆಸಿದ್ದು, ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ. ಶೋಪಿಯಾನ್​​​ನ ಕಾಪ್ರೆನ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭಾರತೀಯ ಸೇನಾಪಡೆ ಜಂಟಿಯಾಗಿ ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಸ್ಥಳವನ್ನು ಸುತ್ತುವರೆದೆ ಸೇನಾಪಡೆ ಎನ್ ಕೌಂಟರ್ ಆರಂಭಿಸಿ ಇದೀಗ ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. ಹತ್ಯೆಯಾದ ಉಗ್ರನನ್ನು ಕಮ್ರನ್ ಬಾಯ್ ಅಲಿಯಾಸ್ ಅನೀಸ್ ಎಂದು ಗುರ್ತಿಸಲಾಗಿದೆ. ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಅಲ್ಲಾಹು ಅಕ್ಬರ್ ಎನ್ನುತ್ತಾ ದೇವಾಲಯಕ್ಕೆ ನುಗ್ಗಿ ವಿಗ್ರಹಕ್ಕೆ ಒದ್ದು ವಿಕೃತಿ: ಸ್ಥಳೀಯರಿಂದ ಸಿಕ್ತು ಧರ್ಮದೇಟು

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments