Select Your Language

Notifications

webdunia
webdunia
webdunia
webdunia

ಸಾಮಾಜಿಕ ಜಾಲತಾಣದಲ್ಲಿ ರೋಷಾವೇಶ ಬೆನ್ನಲ್ಲೇ ಸಿಎಂ, ಡಿಸಿಎಂ ಮನೆಗೆ ದೌಡಾಯಿಸಿದ ಕಿರಣ್‌ ಮಜುಂದಾರ್‌

Biocon Chief Kiran Majumdar Shah

Sampriya

ಬೆಂಗಳೂರು , ಮಂಗಳವಾರ, 21 ಅಕ್ಟೋಬರ್ 2025 (13:38 IST)
Photo Credit X
ಬೆಂಗಳೂರು: ಬೆಂಗಳೂರು ರಸ್ತೆ ಮತ್ತು ಕಸದ ಅವ್ಯವಸ್ಥೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕಿಡಿಕಾರಿ ಸರ್ಕಾರದ ಕೆಂಗಣ್ಣಿಗೆ ಗುರಿಯಾಗಿದ್ದ ಬಯೊಕಾನ್‌ ಮುಖ್ಯಸ್ಥೆ ಕಿರಣ್‌ ಮಜುಂದಾರ್‌ ಷಾ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು. 

ನಗರದಲ್ಲಿ ಕೆಟ್ಟ ರಸ್ತೆಗಳಿವೆ, ತ್ಯಾಜ್ಯದ ಸಮಸ್ಯೆ ಇದೆ ಮಜುಂದಾರ್‌ ಅವರು ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ಧ್ವನಿಯೆತ್ತಿದ್ದರು. ಇದಕ್ಕೆ ಡಿ.ಕೆ. ಶಿವಕುಮಾರ್‌ ತೀಷ್ಣವಾಗಿ ಪ್ರತಿಕ್ರಿಯಿಸಿ, ಉದ್ಯಮಿಗಳ ವಿರುದ್ಧ ಹರಿಹಾಯ್ದಿದ್ದರು.

ಇದೀಗ  ಕಿರಣ್‌ ಮಜುಂದಾರ್‌ ಷಾ ಅವರು ದೀಪಾವಳಿ ಶುಭಾಶಯ ಕೂರುವ ನೆಪದಲ್ಲಿ ಸಿಎಂ ಮತ್ತು ಡಿಸಿಎಂ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. 

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಡಿ.ಕೆ. ಶಿವಕುಮಾರ್‌ ಅವರು, ಇಂದು ನನ್ನ ನಿವಾಸದಲ್ಲಿ ಉದ್ಯಮಿ ಮತ್ತು ಬಯೋಕಾನ್ ಸಂಸ್ಥಾಪಕಿ ಕಿರಣ್‌ ಮಜುಂದಾರ್‌ ಷಾ ಅವರನ್ನು ಭೇಟಿಯಾಗಿದ್ದು ಸಂತೋಷವಾಯಿತು. ಬೆಂಗಳೂರಿನ ಬೆಳವಣಿಗೆ, ನಾವೀನ್ಯತೆ ಮತ್ತು ಕರ್ನಾಟಕದ ಬೆಳವಣಿಗೆಯ ಮುಂದಿನ ಹಾದಿಯ ಕುರಿತು ನಾವು ಚರ್ಚೆ ನಡೆಸಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.

ಮಜುಂದಾರ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೂ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಉಪಸ್ಥಿತರಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಸಂವಿಧಾನ ವಿರೋಧಿ ಅನೈತಿಕ ಪೊಲೀಸ್ ಗಿರಿಗೆ ಈಗ ಕಡಿವಾಣ ಬಿದ್ದಿದೆ: ಸಿದ್ದರಾಮಯ್ಯ