Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಪಾರ್ಟಿ ಮಾಡಲು ಹೋದ ಗೆಳೆಯರ ನಡುವೆ ಕಿರಿಕ್: ಕೊಲೆಯಲ್ಲಿ ಅಂತ್ಯ

webdunia
ಶನಿವಾರ, 16 ಅಕ್ಟೋಬರ್ 2021 (10:02 IST)
ಮಂಗಳೂರು : ಇಲ್ಲಿನ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ತಡರಾತ್ರಿ ನಡೆದಿದೆ.

ಮೃತ ಯುವಕನನ್ನು ಧನುಷ್ (20 ವರ್ಷ) ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ.
ಘಟನೆಯ ವಿವರ : ದಿನಾಂಕ 15-10-2021 (ಶುಕ್ರವಾರ)ರಂದು ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ್ & ಪ್ರಜ್ವಲ್ ಎಂಬವರು ತೆರಳಿದ್ದಾರೆ. ಸಮಯ ಸುಮಾರು ರಾತ್ರಿ 2 ಗಂಟೆಗೆ ಜೇಸನ್ ಸುರತ್ಕಲ್ & ಧನುಷ್ ಎಂಬುವರ ಮಧ್ಯೆ ಜಗಳವಾಗಿದ್ದು, ಈ ವೇಳೆ ಜೇಸನ್ ಸುರತ್ಕಲ್ ಎಂಬಾತನು ತನ್ನಲ್ಲಿರುವ ಹರಿತವಾದ ಆಯುಧದಿಂದ ಧನುಷ್ ಗೆ ಚುಚ್ಚಿದ್ದಾನೆ ಎನ್ನಲಾಗಿದೆ.
ಘಟನೆಯಿಂದ ತೀವ್ರವಾಗಿ ಗಾಯಗೊಂಡ ಧನುಷ್ ನನ್ನು ಇಂಡಿಯಾನ ಆಸ್ಪತ್ರೆಗೆ ಚಿಕಿತ್ಸೆಯ ಕರೆದುಕೊಂಡು ಹೋಗುವಾಗ ಮೃತಪಟ್ಟಿದ್ದಾನೆ.


ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಇಂದಿನಿಂದ ಕಾಂಗ್ರೆಸ್ ಘಟಾನುಘಟಿ ನಾಯಕರುಗಳ ಪ್ರಚಾರ