Select Your Language

Notifications

webdunia
webdunia
webdunia
webdunia

ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ ಹಣ

Kisan Samman Nidhi money to farmers account
ಬೆಳಗಾವಿ , ಗುರುವಾರ, 23 ಫೆಬ್ರವರಿ 2023 (16:12 IST)
ಇದೇ ಫೆ.27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನಮಂತ್ರಿಗಳು ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ ಎಂದು ಕೃಷಿ ಇಲಾಖೆಯ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದರು. ಪ್ರಧಾನಮಂತ್ರಿಗಳ ಕಾರ್ಯಕ್ರಮ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ವೇದಿಕೆ ನಿರ್ಮಾಣ ಮತ್ತಿತರ ಸಿದ್ಧತೆಗಳನ್ನು ಗುರುವಾರ ಪರಿಶೀಲಿಸಿ ಅವರು ಮಾತನಾಡಿದರು. ಇದು ಸಂಪೂರ್ಣ ರೈತರ ಕಾರ್ಯಕ್ರಮವಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ವಿಶೇಷವಾಗಿ ರೈತ ಮಹಿಳೆಯರನ್ನು ಸೇರಿಸಲಾಗುವುದು ಎಂದು ತಿಳಿಸಿದರು. ಮೊದಲ ಬಾರಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯನ್ನು ಬೆಳಗಾವಿಯ ಕಾರ್ಯಕ್ರಮದಲ್ಲಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ. ಕಾರ್ಯಕ್ರಮದ ಸಿದ್ಧತೆ ಹಾಗೂ ವೇದಿಕೆ ನಿರ್ಮಾಣದ ಕುರಿತು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​​ ವಿವರಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪಿಂಚಣಿ ಸಿಗದ ಕಾರಣ ಮನನೊಂದು ಶಿಕ್ಷಕ ಆತ್ಮಹತ್ಯೆ