Publish Date: Wed, 04 Jun 2025 (13:15 IST)
Updated Date: Wed, 04 Jun 2025 (13:19 IST)
ಮೈಸೂರು: ಜನ ಬೆಂಬಲವಿರುವ ಸಿಎಂ ಸಿದ್ದರಾಮಯ್ಯ ಅವರು ಇನ್ನೂ ಅಧಿಕಾರದಲ್ಲಿ 5 ವರ್ಷವೂ ಇರಬಹುದು, 10 ವರ್ಷಗಳೂ ಇರಬಹುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಸಿಎಂ ಬದಲಾವಣೆ ಬಗ್ಗೆ ನಡೆಯುತ್ತಿರುವ ಚರ್ಚೆ ಬಗ್ಗೆ ಮಾತನಾಡಿದ ಅವರು, . ಹೈಕಮಾಂಡ್ ಹಾಗೂ ಶಾಸಕರ ಬೆಂಬಲ ಸಿದ್ದರಾಮಯ್ಯ ಹಾಗೂ ನಮ್ಮ ಸರ್ಕಾರದ ಮೇಲಿದೆ. ಯಾವ ವಿಚಾರ ಯಾವಾಗ ನಿರ್ಧರಿಸಬೇಕು ಎಂಬುದು ಹೈಕಮಾಂಡ್‌ಗೆ ತಿಳಿದಿದೆ ಎಂದರು.
ಇನ್ನೂ ಕಾಂಗ್ರೆಸ್ ಸರ್ಕಾರ 5 ವರ್ಷವೂ ಇರಬಹುದು. ಈ ಸಂಬಂಧ ನನ್ನನ್ನು ಹೆಚ್ಚು ಪ್ರಶ್ನೆ ಕೇಳಿ ಸಿಲುಕಿಸಲು ಯತ್ನಿಸಬೇಡಿ. ನೀವು ಪ್ರಶ್ನೆ ಕೇಳಿದ್ದೀರಾ ನಾನು ಉತ್ತರಿಸಿದ್ದೇನೆ. ನನ್ನದೇ ಪ್ರಶ್ನೆ–ನನ್ನದೇ ಉತ್ತರ ಎಂಬಂತೆ ಬಿಂಬಿಸಬೇಡಿ ಎಂದು ಹೇಳಿದರು.
ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಬಿಜೆಪಿಯ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ ಕಿಕ್ಕೂ ಇಲ್ಲ, ಬ್ಯಾಕೂ ಇಲ್ಲ. ಅವರೇನು ಅದರ ಬಗ್ಗೆ ಮಾತನಾಡುವುದು? ಅವರು ಎಲ್ಲಾ ವಿಚಾರಗಳಲ್ಲೂ ಇಂಥಾದ್ದೇ ಆರೋಪಗಳನ್ನು ಮಾಡುತ್ತಾರೆ ಎಂದರು.