Select Your Language

Notifications

webdunia
webdunia
webdunia
webdunia

ನಂದಿನಿ ಹಾಲಿನ ದರ ಏರಿಕೆ: ಗುಡ್ ನ್ಯೂಸ್ ಕೊಟ್ಟ ಕೆಎಂಎಫ್ ಅಧ್ಯಕ್ಷ

Nandini Milk

Krishnaveni K

ಬೆಂಗಳೂರು , ಬುಧವಾರ, 4 ಡಿಸೆಂಬರ್ 2024 (15:06 IST)
ಬೆಂಗಳೂರು: ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗಲಿದೆ ಎಂಬ ಆತಂಕದಲ್ಲಿದ್ದ ಜನರಿಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಗುಡ್ ನ್ಯೂಸ್ ಒಂದನ್ನು ಕೊಟ್ಟಿದ್ದಾರೆ. ಸದ್ಯಕ್ಕೆ ಅಂತಹ ಪ್ರಸ್ತಾಪ ಇಲ್ಲ ಎಂದಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ರಾಮನಗರದಲ್ಲಿ ಮುಖ್ಯಮಂತ್ರಿಗಳು ನಂದಿನಿ ಹಾಲಿನ ದರ ಏರಿಕೆ ಮಾಡುವ ಬಗ್ಗೆ ಹೇಳಿದ್ದರು. ಆದರೆ ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಸದ್ಯಕ್ಕೆ ಪ್ರಸ್ತಾವನೆ ಇಲ್ಲ. ಆದರೆ ದರ ಏರಿಕೆ ಮಾಡಬೇಕೆಂದು ರೈತರ ಬೇಡಿಕೆಯಿದೆ. ಆದರೆ ಸದ್ಯಕ್ಕೆ ದರ ಏರಿಕೆ ಮಾಡುವ ಬಗ್ಗೆ ಮಾಹಿತಿ ಇಲ್ಲ ಎಂದಿದ್ದಾರೆ.

ಮೊನ್ನೆಯಷ್ಟೇ ಕೋಲಾರದಲ್ಲಿ ಶಾಸಕ ಕೆಪಿ ನಂಜೇಗೌಡ ನಂದಿನಿ ದರ ಏರಿಕೆ ಮಾಡುವ ಬಗ್ಗೆ ಹೇಳಿದ್ದರು. ಇದಕ್ಕೆ ಮೊದಲು ಸಿಎಂ ಸಿದ್ದರಾಮಯ್ಯ ಕೂಡಾ ರೈತರಿಗೆ ನೆರವಾಗುವ ಉದ್ದೇಶದಿಂದ ಅನಿವಾರ್ಯವಾಗಿ ಹಾಲಿನ ದರ ಏರಿಕೆ ಮಾಡಬೇಕಾಗುತ್ತದೆ ಎಂದಿದ್ದರು. ಆದರೆ ಈಗ ಕೆಎಂಎಫ್ ಅಧ್ಯಕ್ಷ ಸದ್ಯಕ್ಕೆ ಅಂತಹ ಪ್ರಸ್ತಾಪ ಇಲ್ಲ ಎಂದಿದ್ದಾರೆ.

ಈಗಾಗಲೇ ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ತತ್ತರಿಸಿದ್ದಾರೆ. ಇದರ ನಡುವೆ ಮತ್ತೊಮ್ಮೆ ಹಾಲಿನ ದರ ಏರಿಕೆ ಮಾಡಲು ಹೊರಟ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಈಗ ಕೆಎಂಎಫ್ ಅಧ್ಯಕ್ಷರ ಹೇಳಿಕೆ ಜನರಿಗೆ ಸ್ವಲ್ಪ ಮಟ್ಟಿಗೆ ನಿರಾಳತೆ ಮೂಡಿಸಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೈಟು ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಪರಿಹಾರವಾಗುತ್ತಾ?: ಅಶೋಕ ಪ್ರಶ್ನೆ