Select Your Language

Notifications

webdunia
webdunia
webdunia
webdunia

ಭೀಮಾನಾಯ್ಕ್ ಪಾಲಾದ ಕೆಎಂಎಫ್ ಅಧ್ಯಕ್ಷ ಸ್ಥಾನ

ಭೀಮಾನಾಯ್ಕ್ ಪಾಲಾದ ಕೆಎಂಎಫ್ ಅಧ್ಯಕ್ಷ ಸ್ಥಾನ
ಬೆಂಗಳೂರು , ಬುಧವಾರ, 10 ಜುಲೈ 2019 (10:23 IST)
ಬೆಂಗಳೂರು : ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಹಾಗೂ ಶಾಸಕ ಭೀಮಾನಾಯ್ಕ್ ಅವರ ನಡುವೆ ಬಾರೀ ಪೈಪೋಟಿ ನಡೆದಿದ್ದು, ಇದೀಗ ಈ ಸ್ಥಾನ ಶಾಸಕ ಭೀಮಾನಾಯ್ಕ್ ಅವರ ಪಾಲಾಗಿದೆ ಎಂಬುದಾಗಿ ತಿಳಿದುಬಂದಿದೆ.



ಈ ಸಂಬಂಧ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಬಳಿ ರೇವಣ್ಣ ಬೇಡಿಕೆ ಇಟ್ಟಿದ್ದರು. ಎಚ್‍ಡಿಡಿ ಅವರೂ ಕೂಡ ಸಮ್ಮತಿ ಸೂಚಿಸಿದ್ದರು. ಆದರೆ  ಶಾಸಕ ಭೀಮಾನಾಯ್ಕ್ ಅವರು, ಒಂದು ವೇಳೆ ಕೆಎಂಎಫ್ ಅಧ್ಯಕ್ಷ ಸ್ಥಾನ ಕೊಟ್ಟಿಲ್ಲ ಅಂದರೆ ಬೇರೆ ಶಾಸಕರಂತೆ ನನ್ನ ದಾರಿ ನೋಡಿಕೊಳ್ಳುತ್ತೇನೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

 

ಈ ಹಿನ್ನಲೆಯಲ್ಲಿ ಹೆದರಿದ ಸಿಎಂ ಕುಮಾರಸ್ವಾಮಿ ಶಾಸಕ ಭೀಮಾನಾಯ್ಕ್ ಅವರಿಗೆ ಕೆಎಂಎಫ್ ಅಧ್ಯಕ್ಷ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಆದಕಾರಣ ಕೆಎಂಎಫ್ ಪಟ್ಟದ ಮೇಲೆ ಕಣ್ಣಿಟ್ಟಿದ್ದ ರೇವಣ್ಣಗೆ ನಿರಾಸೆಯಾಗಿದೆ.

 


 


Share this Story:

Follow Webdunia kannada

ಮುಂದಿನ ಸುದ್ದಿ

ಅತೃಪ್ತ ಶಾಸಕರ ಮನವೊಲಿಸಲು ಹೋಟೆಲ್ ಗೆ ಬಂದ ಡಿಕೆ ಶಿವಕುಮಾರ್ ರನ್ನು ತಡೆದ ಮುಂಬೈ ಪೊಲೀಸರು