Webdunia - Bharat's app for daily news and videos

Install App

ನಂದಿನಿ ಹಾಲು ದರ ಏರಿಕೆ ಮಾಡಲ್ಲ ಎಂದು ಉಲ್ಟಾ ಹೊಡೆದ ಕೆಎಂಎಫ್ ಅಧ್ಯಕ್ಷ

Krishnaveni K
ಶನಿವಾರ, 7 ಡಿಸೆಂಬರ್ 2024 (14:37 IST)
ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆ ಪ್ರಸ್ತಾವನೆ ಸದ್ಯಕ್ಕಿಲ್ಲ ಎಂದಿದ್ದ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಎರಡೇ ದಿನಕ್ಕೆ ಉಲ್ಟಾ ಹೊಡೆದಿದ್ದಾರೆ. ಇದೀಗ ನಂದಿನಿ ಹಾಲು ದರ ಏರಿಕೆ ಬಗ್ಗೆ ಸುಳಿವು ನೀಡಿದ್ದಾರೆ.

ಮೊನ್ನೆಯಷ್ಟೇ ನಂದಿನಿ ಹಾಲಿನ ದರ ಏರಿಕೆ ಮಾಡಲಿದ್ದಾರೆ ಎಂಬ ಸುದ್ದಿಗಳ ಬಗ್ಗೆ ಪ್ರತಿಕ್ರಿಯಿಸಿದ್ದ ಭೀಮಾ ನಾಯ್ಕ್ ಸದ್ಯಕ್ಕೆ ಅಂತಹ ಯಾವುದೇ ಪ್ರಸ್ತಾಪ ಬಂದಿಲ್ಲ. ಸದ್ಯಕ್ಕೆ ನಂದಿನಿ ದರ ಏರಿಕೆ ಮಾಡಲ್ಲ ಎಂದಿದ್ದರು.

ಆದರೆ ಈಗ ರೈತರು ಮತ್ತು ಹಾಲು ಒಕ್ಕೂಟಗಳು ಹಾಲಿನ ದರ ಏರಿಕೆ ಮಾಡಲು ಕೆಎಂಎಫ್ ಗೆ ಮನವಿ ಸಲ್ಲಿಸಿದ್ದಾರೆ. ಪ್ರತೀ ಲೀಟರ್ ಗೆ 5 ರೂ. ಹೆಚ್ಚು ಮಾಡಲು ಮನವಿ ಮಾಡಲಾಗಿದೆ. ಈ ಬಗ್ಗೆ ಪ್ರಸ್ತಾವನೆ ಬಂದಿರುವುದು ನಿಜ ಎಂದು ಈಗ ಭೀಮಾ ನಾಯ್ಕ್ ಒಪ್ಪಿಕೊಂಡಿದ್ದಾರೆ.

ಚಳಿಗಾಲದ ಅಧಿವೇಶನದ ಬಳಿಕ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಭೀಮಾ ನಾಯ್ಕ್ ಹೇಳಿದ್ದಾರೆ. ಹೀಗಾಗಿ ಹೊಸ ವರ್ಷಕ್ಕೆ ನಂದಿನಿ ಹಾಲಿನ ದರ ಏರಿಕೆಯ ಶಾಕ್ ಸಿಗುವ ಸಾಧ್ಯತೆಯಿದೆ. ಈ  ಹಿಂದೆ 50 ಎಂಎಲ್ ಹಾಲು ಹೆಚ್ಚುವರಿ ಮಾಡಿ 2 ರೂ. ದರ ಏರಿಕೆ ಮಾಡಲಾಗಿತ್ತು. ಇದೀಗ ಮತ್ತೆ ಹೆಚ್ಚಳವೆಂದರೆ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments