ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಶುರುವಾಗಿರುವ ಸಿಎಂ ಕುರ್ಚಿ ಪೈಪೋಟಿಗೆ ಸದ್ಯ ಬ್ರೇಕ್ ಬಿದ್ದ ಬೆನ್ನಲ್ಲೇ ಈ ವಿಚಾರವಾಗಿ ಸಚಿವ ಕೆಎನ್ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಮಾಧ್ಯಮವೊಂದಕ್ಕೆ ಈ ಸಂಬಂಧ ಪ್ರತಿಕ್ರಿಯಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ನವೆಂಬರ್ ಕ್ರಾಂತಿಯ ಬಗ್ಗೆ ಬಾಂಬ್ ಸಿಡಿಸಿದ್ದ ರಾಜಣ್ಣ ಇದೀಗ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಪರಿಸ್ಥಿತಿ ಉದ್ಭವವಾಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಕಾಂಗ್ರೆಸ್ ಸಚಿವರು ಕುರ್ಚಿ ಗುದ್ದಾಟದ ಬಗ್ಗೆ ಸೈಲೆಂಟ್ ಆಗಿದ್ದರು. ಇಂದು ಸಿಎಂ ಪುತ್ರ ಯತೀಂದ್ರ ಹೇಳಿಕೆಯ ನಂತರ ರಾಜಣ್ಣ ಡಿಕೆಶಿ ಮುಖ್ಯಮಂತ್ರಿ ಆಗುವ ಪರಿಸ್ಥಿತಿಯೇ ಉದ್ಭವವಾಗುವುದಿಲ್ಲ ಎಂದು ಖಡಕ್ ಆಗಿಯೇ ಪ್ರತಿಕ್ರಿಯಿಸಿದ್ದಾರೆ.
ಈ ಹಿಂದೆ ರಾಜಣ್ಣ ಅವರು ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವನಾಗುವುದಿಲ್ಲ ಎಂದು ಓಪನ್ ಆಗಿ ಹೇಳಿದ್ದರು. ಅದರ ಬೆನ್ನಲ್ಲೇ ಇದೀಗ ರಾಜಣ್ಣ ಹೇಳಿಕೆ ಭಾರೀ ಕುತೂಹಲ ಮೂಡಿಸಿದೆ.