ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಹೇಳಿಕೆ ಕೊಟ್ಟಿದ್ದ ಕೆಎನ್ ರಾಜಣ್ಣಗೆ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಎಚ್ಚರಿಕೆಯೆಲ್ಲ ನನ್ನತ್ರ ನಡೆಯಲ್ಲ ಎಂದು ರಾಜಣ್ಣ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ನಲ್ಲಿ ಈಗ ಸಿಎಂ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಭಾರೀ ಚರ್ಚೆಯಾಗುತ್ತಿದೆ. ಬಹಿರಂಗವಾಗಿ ಕೆಎನ್ ರಾಜಣ್ಣ ಹೇಳಿಕೆ ನೀಡಿದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಬಹಿರಂಗವಾಗಿ ಯಾರೂ ಹೇಳಿಕೆ ನೀಡಬಾರದು ಎಂದು ಎಚ್ಚರಿಕೆ ನೀಡಿದ್ದರು.
ಇದರ ಬಗ್ಗೆ ಪ್ರತಿಕ್ರಿಯಿಸಿರುವ ರಾಜಣ್ಣ ಎಚ್ಚರಿಕೆ ಗಿಚ್ಚರಿಕೆ ಎಲ್ಲಾ ನಡೆಯಲ್ಲ. ತಪ್ಪು ಮಾಡಿದ್ರೆ ತಾನೇ ಎಚ್ಚರಿಕೆ ಮಾತು. ನಾವೇನೂ ತಪ್ಪು ಮಾಡಿಲ್ಲ. ನಾವು ಯಾರೂ ಹೈಕಮಾಂಡ್ ಎದುರಾಗಿ ಹೋಗಿಲ್ಲ ಎಂದು ರಾಜಣ್ಣ ಖಡಕ್ ಆಗಿ ಹೇಳಿದ್ದಾರೆ. ಇನ್ನು, ಡಿಕೆಶಿ ಮತ್ತು ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಅವರನ್ನು ಒಮ್ಮೆ ಊಟಕ್ಕೆ ಮನೆಗೆ ಕರೆಯೋಣ ಬಿಡ್ರೀ ಎಂದು ಪತ್ರಕರ್ತರ ಮುಂದೆ ಹೇಳಿಕೆ ನೀಡಿದ್ದಾರೆ.