Select Your Language

Notifications

webdunia
webdunia
webdunia
webdunia

ಸಚಿವ ಸ್ಥಾನದಿಂದ ಕೆಳಗಿಳಿದ ಕೆಎನ್‌ ರಾಜಣ್ಣಗೆ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಗೆಲುವು

ಶಾಸಕ ಕೆ.ಎನ್.ರಾಜಣ್ಣ

Sampriya

ತುಮಕೂರು , ಗುರುವಾರ, 4 ಸೆಪ್ಟಂಬರ್ 2025 (17:02 IST)
ತುಮಕೂರು: ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗು ಸಚಿವ ಸ್ಥಾನ ಕಳೆದುಕೊಂಡ ಕೆ ಎನ್‌ ರಾಜಣ್ಣ ಅವರು ಸತತ 7ನೇ ಬಾರಿಗೆ ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇಂದು ನಡೆದ ಚುನಾವಣೆಯಲ್ಲಿ, 14 ಜನ ನಿರ್ದೇಶಕರನ್ನು ಒಳಗೊಂಡ ಆಡಳಿತ ಮಂಡಳಿಯು ರಾಜಣ್ಣ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದೆ. ಇದರಿಂದ ಈಚೆಗೆ ಸಚಿವ ಸ್ಥಾನದಿಂದ ಕೆಳಗಿಳಿದ ರಾಜಣ್ಣ ಅಭಿಮಾನಿಗಳಿಗೆ ಸಂಭ್ರಮ ಹೇಳ ತೀರದಾಗಿದೆ. 

ರಾಜಣ್ಣ ಅವರ ಈ ಸಾಧನೆ ತುಮಕೂರು ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಅವರ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಕೆ.ಎನ್. ರಾಜಣ್ಣ ಕರ್ನಾಟಕದ ಸಹಕಾರಿ ಕ್ಷೇತ್ರದಲ್ಲಿ 1972ರಿಂದಲೂ ತಮ್ಮ ಪ್ರಭಾವವನ್ನು ಸ್ಥಾಪಿಸಿದ್ದಾರೆ. ರಾಷ್ಟ್ರೀಯ ಕೃಷಿ ಸಹಕಾರ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷರಾಗಿ (2001-2005 ಮತ್ತು 2015-2020) ಎರಡು ಅವಧಿಗಳಲ್ಲಿ ಸೇವೆ ಸಲ್ಲಿಸಿದ ಅನುಭವವನ್ನು ಅವರು ಹೊಂದಿದ್ದಾರೆ.

ಈ ಹಿಂದೆ ಆರು ಬಾರಿ ಈ ಸ್ಥಾನವನ್ನು ಅಲಂಕರಿಸಿದ್ದ ರಾಜಣ್ಣ, ತಮ್ಮ ಅನುಭವ ಮತ್ತು ನಾಯಕತ್ವದ ಮೂಲಕ ಬ್ಯಾಂಕ್‌ನ ಕಾರ್ಯನಿರ್ವಹಣೆಯನ್ನು ಸುಧಾರಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ವರುಣನ ಆರ್ಭಟಕ್ಕೆ ತತ್ತರಿಸಿದ ನವದೆಹಲಿ ಜನತೆ