ಪೇದೆಗೆ ಚಾಕು ; ರೌಡಿಗೆ ಗುಂಡೇಟು

Webdunia
ಶುಕ್ರವಾರ, 10 ಮೇ 2019 (17:14 IST)
ಕುಖ್ಯಾತ ರೌಡಿಗೆ ಶೂಟೌಟ್ ನಡೆಸಿ ಬಂಧನ ಮಾಡಲಾಗಿದೆ.

ಕುಖ್ಯಾತ ರೌಡಿ ಗೌರೀಶ್ ಎಂಬಾತನನ್ನು ಬಂಧಿಸಲು ಹೋದ ಪೊಲೀಸ್ ಅಧಿಕಾರಿಗಳ ಮೇಲೆ ರೌಡಿಯೊಬ್ಬ  ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ  ಪೊಲೀಸರು ರೌಡಿಯ ಕಾಲಿಗೆ  ಶೂಟೌಟ್ ನಡೆಸಿ ಬಂಧಿಸಿದ ಘಟನೆ ನಡೆದಿದೆ.

ಘಟನೆಯ ಮಾಹಿತಿ ಪಡೆದು ಸ್ಥಳಕ್ಕೆ ನಗರ ಪೋಲಿಸ್ ಆಯುಕ್ತ ಸಂದೀಪ್ ಪಾಟೀಲ್ ಭೇಟಿ ನೀಡಿದ್ದರು. ರೌಡಿಶೀಟರ್ ಗೌರೀಶ್ ವಿರುದ್ಧ ಮಂಗಳೂರಿನ ಪೊಲೀಸ್ ಠಾಣೆಯೊಂದರಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ರೌಡಿಶೀಟರ್ ನ್ನು ಬಂಧಿಸಲು ಬಲೆ ಬೀಸಿದ್ದರು.

ರೌಡಿಶೀಟರ್ ನನ್ನು ಬಂಧಿಸಲು ತೆರಳಿದ್ದ ಪೊಲೀಸ್ ತಂಡದಲ್ಲಿನ ಪೇದೆ ಶೀನಪ್ಪ ಎಂಬವರ ಮೇಲೆ ಆರೋಪಿ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಜಾಗೃತರಾದ ಎಸ್ ಐ ಕಬ್ಬಾಳ್ ರಾಜ್ ಅವರು ತಮ್ಮ ಪ್ರಾಣರಕ್ಷಣೆಗಾಗಿ ರೌಡಿಶೀಟರ್ ನ ಕಾಲಿಗೆ ಫೈರಿಂಗ್ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ರೌಡಿಶೀಟರ್ ವಿರುದ್ಧ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಆರು ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಮೂರು ಕೊಲೆ ಆರೋಪ ಪ್ರಕರಣಗಳಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments