Publish Date: Fri, 14 Dec 2018 (18:08 IST)
Updated Date: Fri, 14 Dec 2018 (18:10 IST)
ಪ್ರಕೃತಿ ವಿಕೋಪ ಪರಿಹಾರವನ್ನು ಸಂತ್ರಸ್ಥರಿಗೆ ನೀಡುವಂತೆ ಒತ್ತಾಯ ಕೇಳಿಬಂದಿದೆ.
ಪರಿಹಾರಕ್ಕೆ ಆಗ್ರಹಿಸಿ ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಮತ್ತು ಧರಣಿ ನಡೆಸಲಾಯಿತು. ಕೊಡಗು ಸಂತ್ರಸ್ತರ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆದಿದೆ. ಸರ್ಕಾರದ ಸೌಲಭ್ಯದಲ್ಲಿ ವಿಳಂಬನೀತಿ ಅನುಸರಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪ ಮಾಡಿದ್ದಾರೆ.
ಹೊಳೆಯಲ್ಲಿರುವ ಮಣ್ಣು ತೆರವುಗೊಳಿಸಬೇಕು. ಅಧಿಕಾರಿಗಳು ನಡೆಸಿದ ಸರ್ವೆ ಕಾರ್ಯವೂ ಯಶಸ್ವಿಯಾಗಿಲ್ಲ. ರೈತರ, ಸಂಘಸಂಸ್ಥೆಗಳ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಸಂತ್ರಸ್ತರ ಕಣ್ಣೀರು ಒರೆಸುವ ಕಾರ್ಯ ಸರ್ಕಾರ ಮಾಡಬೇಕು ಎಂದು ಧರಣಿ ನಿರತರು ಆಗ್ರಹ ಮಾಡಿದ್ದಾರೆ. ಸರಕಾರ ಸಮಸ್ಯೆಗೆ ಸ್ಪಂದನೆ ಮಾಡದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದ್ದಾರೆ.