ದೇವೀರಮ್ಮಣ್ಣಿ ಕೆರೆಯು ಭರ್ತಿ - ಕೋಡಿ ಬಿದ್ದು ಸುಂದರ ಫಾಲ್ಸ್

Webdunia
ಮಂಗಳವಾರ, 24 ಸೆಪ್ಟಂಬರ್ 2019 (17:56 IST)
ಬಹು ವರ್ಷಗಳ ನಂತರದಲ್ಲಿ ಇತಿಹಾಸ ಪ್ರಸಿದ್ಧ ದೇವೀರಮ್ಮಣ್ಣಿ ಕೆರೆಯು ಭರ್ತಿಯಾಗಿದೆ.

ಮಂಡ್ಯ ಇತಿಹಾಸ ಪ್ರಸಿದ್ಧ ದೇವೀರಮ್ಮಣ್ಣಿ ಕೆರೆಯು ಭರ್ತಿಯಾಗಿದ್ದು, ಕೋಡಿಬಿದ್ದು ನಯನ ಮನೋಹರವಾದ ಫಾಲ್ಸ್ ನಿರ್ಮಾಣವಾಗಿದೆ.

ಹೀಗಾಗಿ ಕೆರೆಕೋಡಿ ಅಭಿವೃದ್ಧಿಗೆ ಸಾರ್ವಜನಿಕರ ಆಗ್ರಹ ಕೇಳಿಬರುತ್ತಿದೆ.

ಮಂಡ್ಯ  ಕೃಷ್ಣರಾಜಪೇಟೆ ಪಟ್ಟಣದ ಇತಿಹಾಸ ಪ್ರಸಿದ್ಧ ದೇವೀರಮ್ಮಣ್ಣಿ ಕೆರೆಯು ಭರ್ತಿಯಾಗಿದ್ದು, ನಯನ ಮನೋಹರವಾದ ದೃಶ್ಯವನ್ನು ನಿರ್ಮಾಣ ಮಾಡಿದೆ.

ಹೇಮಾವತಿ ಜಲಾಶಯ ಯೋಜನೆಯ ಕಾಲುವೆಯ ನೀರು ಮತ್ತು ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಲ್ಕೇ ದಿನದಲ್ಲಿ ಕೆರೆಯು ಭರ್ತಿಯಾಗಿರುವುದು ರೈತಬಾಂಧವರು ಹಾಗೂ ಪಟ್ಟಣದ ನಾಗರಿಕರಲ್ಲಿ ಸಂತೋಷ ಉಂಟುಮಾಡಿದೆ. 

ಕೋಡಿಯ ಪ್ರದೇಶದಲ್ಲಿ ಬೆಳೆದಿರುವ ಮುಳ್ಳಿನ ಪೊದೆಗಳು ಹಾಗೂ ಗಿಡಗೆಂಟೆಗಳನ್ನು ತೆರವುಗೊಳಿಸಿ, ಸಾರ್ವಜನಿಕರು ಹಾಗೂ ಪ್ರವಾಸಿಗರು ಕುಳಿತು ಫಾಲ್ಸ್ ನ ದೃಶ್ಯವೈಭವವನ್ನು ಕಣ್ತುಂಬಿಕೊಳ್ಳಲು ಅನುವುಮಾಡಿಕೊಡಬೇಕು.

ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಪುರಸಭೆಯು ಕೆರೆಕೋಡಿಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಬೇಕು. ಬಣ್ಣ ಬಣ್ಣದ ವಿದ್ಯುತ್ ಬೆಳಕಿನ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟರೆ ಈ ಸ್ಥಳವು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಯಾಗುತ್ತದೆ ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments