Select Your Language

Notifications

webdunia
webdunia
webdunia
webdunia

ಕೋಲಾರ: ಶೌಚಾಲಯದಲ್ಲೇ ಮಗುವಿಗೆ ಜನ್ಮವಿತ್ತ ಪ್ರಥಮ ಪಿಯು ವಿದ್ಯಾರ್ಥಿನಿ

Delivery

Krishnaveni K

ಕೋಲಾರ , ಬುಧವಾರ, 3 ಜುಲೈ 2024 (10:42 IST)
ಕೋಲಾರ: ಪ್ರಥಮ ಪಿಯುಸಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ಕಾಲೇಜಿನ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಕೋಲಾರದಲ್ಲಿ ನಡೆದಿದೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೋಲಾರದ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾರ್ಥಿನಿ ಪಿಯು ಓದುತ್ತಿದ್ದಳು. ಎಂದಿನಂತೆ ಕಾಲೇಜಿಗೆ ಬಂದಿದ್ದ ಆಕೆ ಹೊಟ್ಟೆ ನೋವೆಂದು ಶೌಚಾಲಯಕ್ಕೆ ಹೋದವಳು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಕೂಡಲೇ ಆಕೆಯನ್ನು ಕಾಲೇಜಿನ ಸಿಬ್ಬಂದಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಚಾರಿಸಿದಾಗ ಆಕೆ ಕಳೆದ ಎರಡು ವರ್ಷಗಳಿಂದ ಯುವಕನೊಬ್ಬನ ಜೊತೆ ಪ್ರೀತಿಯಲ್ಲಿ ಬಿದ್ದಿದ್ದ ವಿಚಾರ ಹೊರಬಂದಿದೆ. ಬಾಲಕಿಯ ತಲೆಕೆಡಿಸಿ ಯುವಕ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಪರಿಣಾಮ ಆಕೆ ಗರ್ಭಿಣಿಯಾಗಿದ್ದಳು. ಆದರೆ ಅಚ್ಚರಿಯೆಂದರೆ ಈ ವಿಚಾರ ಇದುವರೆಗೆ ಯಾರಿಗೂ ಗೊತ್ತಾಗಿರಲಿಲ್ಲ.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕಿಗೆ ವಂಚಿಸಿದ ಯುವಕ ಘಟನೆ ಬಯಲಿಗೆ ಬರುತ್ತಿದ್ದಂತೇ ತಲೆ ಮರೆಸಿಕೊಂಡಿದ್ದಾನೆ. ಆತನಿಗಾಗಿ ಹುಡುಕಾಟ ನಡೆಸಲಾಗಿದೆ. ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು ಮಗುವಿನ ಸ್ಥಿತಿ ಗಂಭೀರವಾಗಿದೆ. ಆದರೆ ತನಗೆ ಮಗು ಬೇಡ ಎಂದು ಬಾಲಕಿ ಹೇಳುತ್ತಿದ್ದಾಳೆ. ಇದೀಗ ಮಗುವಿನ ಚಿಕಿತ್ಸೆಗೆ ಸಹಕರಿಸಲು ಬಾಲಕಿಯ ಪೋಷಕರಿಗೆ ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪುನೀತ್ ರಾಜ್ ಕುಮಾರ್ ಹೆಸರಿನಲ್ಲೇ ಎಂಥಾ ಶಕ್ತಿ: 10 ಜನರ ಪ್ರಾಣ ಉಳಿಸಿದ ಅಪ್ಪು