Webdunia - Bharat's app for daily news and videos

Install App

ಕೋಲಾರದ ಗಡಿಯಲ್ಲಿ ಕಾಡಾನೆಗಳ ಉಪಟಳ

Webdunia
ಶುಕ್ರವಾರ, 16 ಜುಲೈ 2021 (15:17 IST)
ಕೋಲಾರದ ಗಡಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು ಕಳೆದ ಒಂದು ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಬಲಿಯಾಗಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ನಾಡಗುಮ್ಮನಹಳ್ಳಿ ಗ್ರಾಮದ ಬಳಿ ರೈತನ ಮೇಲೆ ದಾಳಿ ನಡೆಸಿರುವ ಕಾಡಾನೆ ರೈತನನ್ನ ತುಳಿದು ಸಾಯಿಸಿದೆ. ಗ್ರಾಮದ ಭತ್ತೆಪ್ಪ (50) ಎಂಬ ರೈತ ಆನೆ ದಾಳಿಯಿಂದ ಮೃತಪಟ್ಟಿದ್ದು, ನೆಲಗಡಲೆ ಭಿತ್ತನೆ ಮಾಡಿದ ಜಮೀನಿನ ಬಳಿ ಹೋದಾಗ ಕಾಡಾನೆ ದಾಳಿ ನಡೆಸಿದೆ. ಇನ್ನು ಕಳೆದ ಮೂರು ದಿನಗಳ‌ ಹಿಂದಷ್ಟೆ ರೈತ ಮಹಿಳೆಯ ಮೇಲೆ ಕಾಡಾನೆಗಳು ದಾಳಿ ನಡೆಸಿದ ಪರಿಣಾಮ ಆಕೆ ಸಾವನ್ನಪ್ಪಿದ್ದಳು, ಒಂದೇ ವಾರದಲ್ಲಿ ಎರಡನೇ ಪ್ರಕರಣ ಇದಾಗಿದ್ದು ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಗಡಿಯಲ್ಲೇ  ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು,
ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ದ ಗಡಿ ಗ್ರಾಮಗಳ ಜನರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments