Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಕೆಲವರಿಗೆ ಟಿಕೆಟ್ ಕೈತಪ್ಪುತ್ತದೆ ಎಂದು ಪರೋಕ್ಷವಾಗಿ ಹೇಳಿದ ಕೋಟಾ ಶ್ರೀನಿವಾಸ್ ಪೂಜಾರಿ

Kota Srinivas Pujari who indirectly said that the ticket will miss the hands of some people in the stat
bangalore , ಗುರುವಾರ, 8 ಡಿಸೆಂಬರ್ 2022 (17:13 IST)
ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ.ಹಿಮಾಚಲ ಪ್ರದೇಶದಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆಂಬ ವಿಶ್ವಾಸ ಇದೆ ಎಂದು ಮಲ್ಲೇಶ್ವರಂ ಬಿಜೆಪಿ ಕಛೇರಿಯಲ್ಲಿ ಸಚಿವ ಕೋಟಾ ಶ್ರಿನಿವಾಸ ಪೂಜಾರಿ ಹೇಳಿದ್ದಾರೆ.
 
ಇಡೀ ದೇಶದಲ್ಲಿ ಭಾರತೀಯ ಜನತಾ ಪಕ್ಷದ ಪರವಾದ ಅಲೆ ಎದ್ದಿದೆ.ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಗೆಲ್ಲುತ್ತದೆ.ಪಕ್ಷದ ಗೆಲುವಿಗೆ ಕೆಲಸ ಮಾಡಿದ ಎಲ್ಲಾ ಕಾರ್ಯಕರ್ತರು, ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ರು.ಅಲ್ಲದೇ ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು,ಆ ಶ್ರಮದ ಸಾರ್ಥಕತೆಯನ್ನು ಕರ್ನಾಟಕದಲ್ಲಿ ನೀವು ಕಾಣಲಿದ್ದೀರಿ.ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಕೊಡಬೇಕೆಂದು ಹೈಕಮಾಂಡ್ ತೀರ್ಮಾನ ಮಾಡುತ್ತೆ.ಪರೋಕ್ಷವಾಗಿ ರಾಜ್ಯದಲ್ಲಿ ಕೆಲವರಿಗೆ ಟಿಕೆಟ್ ಕೈತಪ್ಪುತ್ತದೆ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಲೇಶ್ವರಂ ನ್ನ ಬಿಜೆಪಿ‌ ಕಛೇರಿಯಲ್ಲಿ ಹಬ್ಬದ ಸಂಭ್ರಮ