Publish Date: Sat, 23 Feb 2019 (15:45 IST)
Updated Date: Sat, 23 Feb 2019 (15:46 IST)
ಬೆಟ್ಟದ ತಪ್ಪಲಿನಲ್ಲಿರುವ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿ ಮಹಾ ರಥೋತ್ಸವ ಸಡಗರದಿಂದ ನಡೆಯಿತು.
ಅರಸೀಕೆರೆ ತಾಲ್ಲೂಕಿನ ಕಣಕಟ್ಟೆ ಹೋಬಳಿಯ ಹಿರೇ ಸಾದರಹಳ್ಳಿ ಸಮೀಪದ ಬೆಟ್ಟದ ತಪ್ಪಲಿನಲ್ಲಿರುವ ಶ್ರೀಗುರು ಕೊಟ್ಟೂರೇಶ್ವರ ಸ್ವಾಮಿ ಮಹಾ ರಥೋತ್ಸವಕ್ಕೆ ಸಹಸ್ರಾರು ಭಕ್ತರು ಸಾಕ್ಷಿಯಾದರು. ಭಕ್ತರ ಜಯಘೋಷಗಳ ನಡುವೆ ರಥೋತ್ಸವ ಅದ್ಧೂರಿಯಿಂದ ನೆರವೇರಿತು.
ಸಂಪ್ರದಾಯದಂತೆ ವ್ಯಾಸ ಹುಣ್ಣಿಮೆಯಂದು ನಡೆಯುವ ಗುರು ಕೊಟ್ಟೂರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ ವಿವಿಧ ಭಾಗಗಳಿಂದ ಅಪಾರ ಭಕ್ತರು ಬರುತ್ತಾರೆ. ಗುರು ಕೊಟ್ಟೂರೇಶ್ವರ ಸ್ವಾಮಿಗೆ ರುದ್ರಾಭಿಷೇಕ, ಪಂಚಾಮೃತ, ಅಭಿಷೇಕ ಹಾಗೂ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಮಹಾರಥದ ಚಕ್ರಗಳಿಗೆ ಸಂಪ್ರದಾಯದಂತೆ ಪೂಜಾಕಾರ್ಯ ಶಾಸ್ತ್ರೋಕ್ತವಾಗಿ ಪೂರ್ಣಗೊಳಿಸಿ ಮಹಾ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.