ಬೆಂಗಳೂರು: ಸರ್ವಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಈಗ ಕೊತ್ವಾಲ್ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ ಎಂದು ಜೆಡಿಎಸ್ ಹೇಳಿದೆ.
ನಗರದಲ್ಲಿ ನಡೆದ ಪುಡಿ ರೌಡಿಗಳ ಅಟ್ಟಹಾಸದ ವಿಡಿಯೋವೊಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಪುಡಿ ರೌಡಿಗಳ ಗುಂಪೊಂದು ಅಂಗಡಿ ನುಗ್ಗಿ, ಅಲ್ಲಿನ ವಸ್ತುಗಳನ್ನು ನೆಲಕ್ಕೆ ಹೊಡೆದು ಕುಕೃತ್ಯ ಮೆರೆದಿದ್ದಾರೆ.
ಈ ವಿಡಿಯೋವನ್ನು ಶೇರ್ ಮಾಡಿದ ಜೆಡಿಎಸ್, ರಾಜ್ಯ ಸರ್ಕಾರವನ್ನು ಪ್ರಶ್ನೆ ಮಾಡಿದೆ. ಎತ್ತ ಸಾಗಿದೆ ರಾಜ್ಯದ ಕಾನೂನು ಸುವ್ಯವಸ್ಥೆ ?
ಸರ್ವಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಈಗ ಕೊತ್ವಾಲ್ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ.
ಬೆಂಗಳೂರಿನ ಬಿಟಿಎಂ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಿತಿಮೀರಿದೆ ಪುಡಿರೌಡಿಗಳ ಅಟ್ಟಹಾಸ. ಪುಂಡರಿಗೆ ಪೊಲೀಸರು, ಕಾನೂನಿನ ಭಯವೇ ಇಲ್ಲವಾಗಿದೆ.
ರಾಜಧಾನಿ ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಪಾತಳಕ್ಕೆ ಕುಸಿದಿದೆ.
ಕಾಂಗ್ರೆಸ್ ಸರ್ಕಾರದ ಅರಾಜಕತೆಯಲ್ಲಿ ದಿನೇ ದಿನೇ ಸಾರ್ವಜನಿಕರಿಗೆ ರಕ್ಷಣೆ ಎಂಬುದು ಮರೀಚಿಕೆಯಾಗಿದ್ದು, ಜನರು ಆತಂಕದಲ್ಲಿ ಬದುಕುವಂತಾಗಿದೆ.