Select Your Language

Notifications

webdunia
webdunia
webdunia
webdunia

ಕೊಡಗಿನಲ್ಲಿ ಕೋವಿಡ್ ಸ್ಫೋಟ!

ಕೊಡಗಿನಲ್ಲಿ ಕೋವಿಡ್ ಸ್ಫೋಟ!
ಮಡಿಕೇರಿ , ಭಾನುವಾರ, 12 ಡಿಸೆಂಬರ್ 2021 (16:21 IST)
ಮಡಿಕೇರಿ : ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ.
ಇಂದು ಒಂದೇ ದಿನ 28 ವಿದ್ಯಾರ್ಥಿಗಳು ಸೇರಿದಂತೆ 49 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆಲ್ಲೂರು ಸಿದ್ಧಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 19 ವಿದ್ಯಾರ್ಥಿಗಳಿಗೆ ಪಾಸಿಟಿವ್ ಇರುವುದು ದೃಢವಾಗಿದೆ. ಶಾಲೆಯ 8, 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿದೆ. 

ಶಾಲೆಯಲ್ಲಿರುವ ಒಟ್ಟು 210 ವಿದ್ಯಾರ್ಥಿಗಳ ಪೈಕಿ 75 ವಿದ್ಯಾರ್ಥಿಗಳಿಗೆ ಅರೋಗ್ಯ ಇಲಾಖೆಯಿಂದ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಅವರಲ್ಲಿ 19 ವಿದ್ಯಾರ್ಥಿಗಳಲ್ಲಿ ಸೋಂಕು ದೃಢವಾಗಿದೆ. ಇನ್ನೂ 135 ವಿದ್ಯಾರ್ಥಿಗಳ ವರದಿ ಬಾಕಿಯಿದ್ದು, ವರದಿಗಾಗಿ ಅರೋಗ್ಯ ಇಲಾಖೆ ಕಾಯುತ್ತಿದೆ.

ಕಳೆದ ವಾರವಷ್ಟೇ ಈ ಶಾಲೆಯ 11 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಶಾಲೆಗಳಿಗೆ ಅರೋಗ್ಯ ಅಧಿಕಾರಿ ಡಾ. ವೆಂಕಟೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಸತಿ ಶಾಲೆಗಳಲ್ಲಿ ಕೋವಿಡ್ ನಿಯಮಗಳನ್ನು ಸರಿಯಾದ ರೀತಿಯಲ್ಲಿ ಪಾಲನೆಯಾಗದೇ ಇರುವುದರಿಂದ ಕೋವಿಡ್ ಪ್ರಕರಣ ಹೆಚ್ಚುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ನಡುವೆಯೂ ಮಕ್ಕಳಿಗೆ ಪ್ರವಾಸ ಶಾಲೆ ವಿರುದ್ಧ ಸರ್ಕಾರ ನೋಟಿಸ್