Select Your Language

Notifications

webdunia
webdunia
webdunia
webdunia

ಬಿಬಿಎಂಪಿ ಗದ್ದುಗೆಗಾಗಿ ಕೈ ಕಸರತ್ತು: ಗೌಡರೊಂದಿಗೆ ಪರಮೇಶ್ವರ್ ಮಾತುಕತೆ

ಬಿಬಿಎಂಪಿ ಗದ್ದುಗೆಗಾಗಿ ಕೈ ಕಸರತ್ತು: ಗೌಡರೊಂದಿಗೆ ಪರಮೇಶ್ವರ್ ಮಾತುಕತೆ
ಬೆಂಗಳೂರು , ಮಂಗಳವಾರ, 1 ಸೆಪ್ಟಂಬರ್ 2015 (12:03 IST)
ಬಿಬಿಎಂಪಿಯ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತನ್ನು ನಡೆಸುತ್ತಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರನ್ನು ಇಂದು ಮಧ್ಯಾಹ್ನದ ವೇಳೆಗೆ ಭೇಟಿ ಮಾಡಲಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳು ತಿಳಿಸಿವೆ.  
 
ಹೌದು, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ನಿನ್ನೆಯಷ್ಟೇ ಪ್ರತಿಕ್ರಿಯಿಸಿ ಬೆಂಗಳೂರು ನಗರದ ಅಭಿವೃದ್ಧಿಯ ದೃಷ್ಟಿಯಿಂದ ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೇ ಪರಮೇಶ್ವರ್ ಇಂದು ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆಗಳಿವೆ. 
 
ಇನ್ನು ಪರಮೇಶ್ವರ್ ಅವರೊಂದಿಗೆ ಬೆಂಗಳೂರು ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರೂ ಕೂಡ ಭೇಟಿ ನೀಡಿ ಮಾತುಕತೆ ನಡೆಸುವ ಮೂಲಕ ಸಾಥ್ ನೀಡಲಿದ್ದಾರೆ ಎನ್ನಲಾಗಿದ್ದು, ಮಾತುಕತೆಯ ಬಳಿಕ ಕಾಂಗ್ರೆಸ್ ಇಂದೇ ತನ್ನ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 

Share this Story:

Follow Webdunia kannada