Select Your Language

Notifications

webdunia
webdunia
webdunia
webdunia

ಇಂದು KPCC ಸ್ಕ್ರೀನಿಂಗ್ ಕಮಿಟಿ ಸಭೆ

KPCC screening committee meeting today
bangalore , ಸೋಮವಾರ, 27 ಮಾರ್ಚ್ 2023 (17:00 IST)
ಕಾಂಗ್ರೆಸ್ ಮೊದಲ ಪಟ್ಟಿ ಬಳಿಕ 2ನೇ ಹಂತದ ಪಟ್ಟಿ ಅಂತಿಮಗೊಳಿಸುವ ನಿಟ್ಟಿನಲ್ಲಿ ಕಸರತ್ತು ಶುರುವಾಗಿದೆ. ಶನಿವಾರ 124 ಮಂದಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಆದರೆ ಮೊದಲ ಪಟ್ಟಿಯಲ್ಲಿ ಆರು ಮಂದಿ ಹಾಲಿ ಶಾಸಕರ ಹೆಸರು ಕೈಬಿಡಲಾಗಿದೆ. ಈ ನಿಟ್ಟಿನಲ್ಲಿ ಎರಡನೇ ಹಂತದ ಪಟ್ಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಸೋಮವಾರ ಉಳಿದ ನೂರು ಕ್ಷೇತ್ರಗಳ ಅಭ್ಯರ್ಥಿಯ ಆಯ್ಕೆಯ ಕುರಿತಾಗಿ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ. ಸ್ಕ್ರೀನಿಂಗ್ ಕಮಿಟಿ ಅಧ್ಯಕ್ಷ ಮೋಹನ್ ಪ್ರಕಾಶ ನೇತೃತ್ವದಲ್ಲಿ ಬೆಂಗಳೂರು ಹೊರವಲಯದಲ್ಲಿ ಸಭೆ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್. ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತಿತರರು ಭಾಗಿಯಾಗಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮುಸ್ಲಿಂ ಮೀಸಲಾತಿಯನ್ನ ರದ್ದು ಪಡಿಸಿರುವ ವಿಚಾರವಾಗಿ ಜೆಡಿಎಸ್ ನಿಂದ ಧರಣಿ