ಬೆಂಗಳೂರು: ಆರ್ ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದಿದ್ದಕ್ಕೆ ಸಚಿವ ಪ್ರಿಯಾಂಕ್ ಖರ್ಗೆಗೆ ನಿಂದಿಸುವುದು ಖಂಡನೀಯ. ಅವರ ಜೊತೆಗೆ ನಾವಿದ್ದೇವೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.
ಆರ್ ಎಸ್ಎಸ್ ಚಟುವಟಿಕೆಗಳ ಮೇಲೆ ನಿಯಂತ್ರಣ ಹೇರಬೇಕು ಎಂದು ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರ ಬರೆದಿದ್ದರು. ಇದಾದ ಬಳಿಕ ನನಗೆ ಅನೇಕ ಬೆದರಿಕೆ ಕರೆಗಳು ಬರುತ್ತಿವೆ ಎಂದು ಪ್ರಿಯಾಂಕ್ ಖರ್ಗೆ ಆರೋಪಿಸಿದ್ದರು. ನಿನ್ನೆ ಅಡಿಯೋವೊಂದನ್ನೂ ಬಿಡುಗಡೆ ಮಾಡಿದ್ದರು.
ಇದರ ಬಗ್ಗೆ ಈಗ ಕೃಷ್ಣ ಭೈರೇಗೌಡ ಪ್ರತಿಕ್ರಿಯಿಸಿದ್ದಾರೆ. ಸಂಪುಟ ಸಹೋದ್ಯೋಗಿ , ಮಿತ್ರ ಶ್ರೀ ಪ್ರಿಯಾಂಕ್ ಖರ್ಗೆಯವರನ್ನು ನಿಂದಿಸುವುದು ಮತ್ತು ಅವರ ಕುಟುಂಬಸ್ಥರ ಮೇಲೆ ಅಸಭ್ಯವಾಗಿ ದಾಳಿ ನಡೆಸುತ್ತಿರುವುದು ಖಂಡನೀಯ , ಅವರ ಜೊತೆಗೆ ನಾವೆಲ್ಲೂರು ಇದ್ದೇವೆ
ಸಂವಿದಾನ ವಿರೋಧಿ ಚಟುವಟಿಕೆಗಳನ್ನು ನಡೆಸುವ , ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ದ್ವೇಷದ ವಿಷ ಬೀಜ ಬಿತ್ತುವ ಯಾವುದೇ ಸಂಘಟನೆಗಳಿಗೆ ಸರ್ಕಾರಿ ಜಾಗ ಬಳಸಿಕೊಳ್ಳಲು ಅವಕಾಶ ಇರಬಾರದು.
ಬಿಜೆಪಿ ಪರಿವಾರದವರು ಸಾರ್ವಜನಿಕ ವಾಗ್ವದದ ಮಟ್ಟವನ್ನು ಬಹಳ ಕೀಳುಮಟ್ಟಕ್ಕೆ ಇಳಿಸಿದ್ದಾರೆ. ಅದರ ಭಾಗವಾಗಿಯೇ ಪ್ರಿಯಾಂಕ್ ಖರ್ಗೆಯವರನ್ನು ಫೋನಿನ ಮೂಲಕ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಕೊಡುವುದು, ನಿಂದಿಸುವುದು ಹಾಗೂ ಟ್ರೊಲ್ ಮಾಡುವುದು ಸಭ್ಯತೆಯಲ್ಲ ಎಂದಿದ್ದಾರೆ.