Select Your Language

Notifications

webdunia
webdunia
webdunia
webdunia

ಹಾಸನ ಮೃತ ಕುಟುಂಬದವರಿಗೆ ನಷ್ಟ ಭರಿಸಲಂತೂ ನಮ್ಮಿಂದಾಗಲ್ಲ ಕೃಷ್ಣಭೈರೇಗೌಡ ಶಾಕಿಂಗ್ ಹೇಳಿಕೆ

Krishna Bairegowda

Krishnaveni K

ಹಾಸನ , ಶನಿವಾರ, 13 ಸೆಪ್ಟಂಬರ್ 2025 (16:20 IST)
ಹಾಸನ: ಗಣೇಶ ಮೆರವಣಿಗೆ ವೇಳೆ ಮೃತಪಟ್ಟವರ ಕುಟುಂಬದವರಿಗೆ ನಷ್ಟ ಭರಿಸಲು ಕೊಡಲು ನಮ್ಮಿಂದ ಸಾಧ್ಯವಿಲ್ಲ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ.

ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಟ್ಯಾಂಕರ್ ಹರಿದು 9 ಮಂದಿ ಸಾವನ್ನಪ್ಪಿದ್ದರು. ಘಟನಾ ಸ್ಥಳಕ್ಕೆ ತೆರಳಿರುವ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು ಇದೊಂದು ಹೃದಯ ವಿದ್ರಾವಕ ಘಟನೆ. ಮೃತರ ಕುಟುಂಬಸ್ಥರಿಗೆ ಸರ್ಕಾರದ ಪರವಾಗಿ ಸಾಂತ್ವನ ಹೇಳಿದ್ದೇನೆ. ತಲಾ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಸೂಚಿಸಿದ್ದಾರೆ. ಇನ್ನೂ ಹೆಚ್ಚಿನ ಪರಿಹಾರ ಕೇಳುತ್ತಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ.

ಮೃತರ ಕುಟುಂಬದವರಿಗೆ ನಷ್ಟ ಭರಿಸಲು ಕೊಡಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಅವರಿಗೆ ಸಹಾಯದ ರೀತಿಯಲ್ಲಿ ಹಣ ಕೊಡುತ್ತಿದ್ದೇವೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಅಲ್ಲದೆ ಘಟನೆ ಬಗ್ಗೆ ಸಂಪೂರ್ಣ ತನಿಖೆ ನಡೆಸಲು ಪೊಲೀಸರಿಗೆ ಆದೇಶಿಸಿದ್ದಾಗಿ ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದಲ್ಲಿ ಸರ್ಕಾರದ ಕೈವಾಡ: ಪ್ರಹ್ಲಾದ್ ಜೋಶಿ ಗರಂ