ಬೆಂಗಳೂರು: ನಾಳೆ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಂಗಳೂರಿನಾದ್ಯಂತ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಸೋಮವಾರ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.
 
									
			
			 
 			
 
 			
					
			        							
								
																	ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು ಎಂದು ಸೂಚನೆ ನೀಡಲಾಗಿದೆ.
									
										
								
																	ಪಟ್ಟಣದ ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು ಎಂದು ಖಡಕ್ ಆಗಿ ಸೂಚಿಸಲಾಗಿದೆ. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ಎಚ್ಚರಿಸಿದ್ದಾರೆ.
									
											
							                     
							
							
			        							
								
																	ವಿಷ್ಣುವಿನ ಎಂಟನೇ ಅವತಾರವಾದ ಭಗವಾನ್ ಕೃಷ್ಣನ ಜನ್ಮ ದಿನವೆಂದು ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತದೆ. ಈ ವರ್ಷ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಗಸ್ಟ್ 26ರಂದು ಆಚರಿಸಲಾಗುತ್ತದೆ.