Publish Date: Mon, 05 Jan 2026 (16:51 IST)
Updated Date: Mon, 05 Jan 2026 (16:54 IST)
ಬೆಂಗಳೂರು: ರಾಜ್ಯ ನಾಯಕತ್ವ ವಿಚಾರವಾಗಿ ಸಚಿವ ಕೃಷ್ಣಬೈರೇಗೌಡ ಅವರು ನೀಡಿರುವ ಸ್ಫೋಟಕ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.
ನನಗಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆ ಕಷ್ಟಸಾಧ್ಯ . ಸದ್ಯ ಸಿಎಂ ಕುರ್ಚಿ ವಿಚಾರವಾಗಿ ಬಿಸಿಬಿಸಿ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಕೃಷ್ಣಬೈರೇಗೌಡ ಅವರ ಈ ಹೇಳಿಕೆ ರಾಜಕೀಯವಾಗಿ ಹೆಚ್ಚು ಮಹತ್ವ ಪಡೆದುಕೊಂಡಿದೆ.
ಸಿದ್ದರಾಮಯ್ಯನವರ ಪರ್ಯಾಯ ವ್ಯವಸ್ಥೆ ಕಷ್ಟಸಾಧ್ಯ. ಹಾಗೆಂದು ಬೇರೆಯವರಿಗೆ ಈ ಸಾಮರ್ಥ್ಯ ಇಲ್ಲ ಎಂದರ್ಥವಲ್ಲ. ಅವರ ನಾಯಕತ್ವವೇ ಬೇರೆ, ಬೇರೆಯವರ ಸಾಮರ್ಥ್ಯವೇ ಬೇರೆ ಎಂದು ಕಂದಾಯ ಸಚಿವರು ವಿಶ್ಲೇಷಿಸಿದ್ದಾರೆ.
ಇನ್ನೂ ಸಿಎಂ ಹಾಗೂ ಡಿಸಿಎಂ ಇಬ್ಬರ ಕಾರ್ಯವೈಖರಿ ಬಗ್ಗೆ ಕೃಷ್ಣಬೈರೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯನವರಂತಹ ನಾಯಕತ್ವ ಇನ್ನೆಲ್ಲೂ ಇಲ್ಲ. ನಮಗೆಲ್ಲಾ ಅವರಿಂದ ಗೌರವ ಹೆಚ್ಚಿದೆ. ನಾಯಕತ್ವ ಬದಲಾವಣೆ ಕುರಿತಂತೆ ನಾನು ಹೆಚ್ಚು ಮಾತನಾಡುವುದಿಲ್ಲ. ಅದರ ಬಗ್ಗೆ ಹೇಳಲು ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.