ರಾಯಚೂರು: ಕೆಆರ್‌ಎಸ್ ಡ್ಯಾಂಗೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದು ಎನ್ನುವ ಸಚಿವ ಮಹಾದೇವಪ್ಪ ಹೇಳಿಕೆಗೆ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಕಾವೇರಿ ಪ್ರಾಂತ್ಯದ ಜನರಿಗೆ ನೀರಿನ ವ್ಯವಸ್ಥೆ ಮಾಡಬೇಕು ಎನ್ನುವ ಉದ್ದೇಶದಿಂದ ಮೈಸೂರು ಸಂಸ್ಥಾನದ ಆಗಿನ ರಾಜಮಾತೆ ತಮ್ಮ ಆಭರಣಗಳನ್ನ ಮಾರಾಟ ಮಾಡಿ ಕೆಆರ್‌ಎಸ್ ಜಲಾಶಯವನ್ನು ಕಟ್ಟಿಸಿದ್ದಾರೆ ಎನ್ನುವ ಮೂಲಕ ಮಹಾದೇವಪ್ಪ ಹೇಳಿಕೆಗೆ ಕೌಂಟರ್ ನೀಡಿದ್ದಾರೆ.
ರಾಜಮನೆತನದ ತ್ಯಾಗದ ಫಲವಾಗಿ ಕೆಆರ್‌ಎಸ್ ಡ್ಯಾಂ ನಿರ್ಮಾಣವಾಗಿದೆ. ಇನ್ನೂ ಬೇರೆ ಬೇರೆ ವಿಚಾರ ಬಂದರೆ, ಬೇರೆಯವರ ಹೆಸರುಗಳು ಬಂದರೆ ಅದರ ಬಗ್ಗೆ ಇತಿಹಾಸ ತಜ್ಞರೇ ಹೇಳಬೇಕು ಹೊರತು ನಾವು ಅದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.