ಬೆಂಗಳೂರು: ರಾಜ್ಯದಲ್ಲಿ ಅಲ್ಲಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಈ ಬಾರೀ ನದಿಗಳು ತುಂಬಿ ಹರಿಯುತ್ತಿದೆ. ಒಂದೇ ವರ್ಷದಲ್ಲಿ 3ನೇ ಬಾರಿ ಕೃಷ್ಣ ರಾಜನಗರ ಜಲಾಶಯ ಭರ್ತಿಯಾಗಿದೆ. ನಮ್ಮ ಸರ್ಕಾರದ ಮೇಲೆ ವರುಣನ ಕೃಪೆಯಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಬರೆದುಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಕಾವೇರಿಗೆ ಬಾಗಿನ ಅರ್ಪಿಸುವ ಪೋಟೋವನ್ನು ಶೇರ್ ಮಾಡಿ, ಡಿಕೆ ಶಿವಕುಮಾರ್ ಬರೆದುಕೊಂಡಿದ್ದಾರೆ.
ಕೆಆರ್ ಎಸ್ ವರ್ಷದಲ್ಲಿ 3ನೇ ಬಾರಿ ಭರ್ತಿ!
ನಮ್ಮ ಸರ್ಕಾರದ ಮೇಲೆ ವರುಣನ ಕೃಪೆಯಿದೆ.
ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದ್ದಾಳೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ.
ಬೀದರ್ ನಿಂದ ಚಾಮರಾಜನಗರದವರೆಗೆ, ಬಳ್ಳಾರಿಯಿಂದ ಕೋಲಾರದವರೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಜಲಾಶಯಗಳು, ಕೆರೆಕಟ್ಟೆಗಳು ಭರ್ತಿಯಾಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ಯಾವುದೇ ತೊಂದರೆ ಇಲ್ಲ. ನಮ್ಮ ಸರ್ಕಾರ ವರುಣನ ಕೃಪೆಗೆ ಪಾತ್ರವಾಗಿದೆ.