ಬೆಂಗಳೂರು: ರಾಜ್ಯ ಸರ್ಕಾರದ ಸಿಡಿದೆದ್ದಿರುವ ಸಾರಿಗೆ ನೌಕರರು ಸಮರಕ್ಕೆ ಮುಂದಾಗಿದ್ದಾರೆ. ಈ ದಿನದಿಂದ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಗಳು ರಸ್ತೆಗಿಳಿಯಲ್ಲ.
ಆಗಸ್ಟ್ 5 ರಿಂದ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಹೂಡಲಿದ್ದಾರೆ. ಸಾರಿಗೆ ನೌಕರರ ಜಂಟಿ ಕ್ರಿಯಾಸಮಿತಿ ಮುಷ್ಕರಕ್ಕೆ ಕರೆ ನೀಡಿದೆ. ನಾಲ್ಕು ಸಾರಿಗೆನಿಗಮಗಳು ಇದರಲ್ಲಿ ಭಾಗಿಯಾಗಲಿವೆ. ಇದಕ್ಕೆ ಪೂರ್ವಭಾವಿಯಾಗಿ ಇಂದು ನೌಕರರು ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ.
ಸಾರಿಗೆ ನೌಕರರ ಬೇಡಿಕೆಗಳೇನು?
ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನೌಕರರು ಮುಷ್ಕಕರಕ್ಕೆ ಕರೆ ನೀಡಿದ್ದಾರೆ. ಬಾಕಿ ವೇತನ ಬಿಡುಗಡೆ, ಹೊಸ ವೇತನದಲ್ಲಿ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಲಿದೆ.
ನಾವು ಎಸ್ಮಾ ಜಾರಿಗೊಳಿಸಿದರೂ ಜಗ್ಗಲ್ಲ. ನಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ನಡೆಸುವುದಾಗಿ ನೌಕರರ ಸಂಘ ಸ್ಪಷ್ಟಪಡಿಸಿದೆ. ಈಗ ಸರ್ಕಾರ ನೌಕರರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಮಾಡುತ್ತದೆಯೇ ನೋಡಬೇಕಿದೆ.