ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

Krishnaveni K
ಗುರುವಾರ, 31 ಜುಲೈ 2025 (09:34 IST)
ಬೆಂಗಳೂರು: ರಾಜ್ಯ ಸರ್ಕಾರದ ಸಿಡಿದೆದ್ದಿರುವ ಸಾರಿಗೆ ನೌಕರರು ಸಮರಕ್ಕೆ ಮುಂದಾಗಿದ್ದಾರೆ. ಈ ದಿನದಿಂದ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಗಳು ರಸ್ತೆಗಿಳಿಯಲ್ಲ.

ಆಗಸ್ಟ್ 5 ರಿಂದ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಹೂಡಲಿದ್ದಾರೆ. ಸಾರಿಗೆ ನೌಕರರ ಜಂಟಿ ಕ್ರಿಯಾಸಮಿತಿ ಮುಷ್ಕರಕ್ಕೆ ಕರೆ ನೀಡಿದೆ. ನಾಲ್ಕು ಸಾರಿಗೆನಿಗಮಗಳು ಇದರಲ್ಲಿ ಭಾಗಿಯಾಗಲಿವೆ. ಇದಕ್ಕೆ ಪೂರ್ವಭಾವಿಯಾಗಿ ಇಂದು ನೌಕರರು ಉಪವಾಸ ಸತ್ಯಾಗ್ರಹ ಮಾಡಲಿದ್ದಾರೆ.

ಸಾರಿಗೆ ನೌಕರರ ಬೇಡಿಕೆಗಳೇನು?
ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನೌಕರರು ಮುಷ್ಕಕರಕ್ಕೆ ಕರೆ ನೀಡಿದ್ದಾರೆ. ಬಾಕಿ  ವೇತನ ಬಿಡುಗಡೆ, ಹೊಸ ವೇತನದಲ್ಲಿ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಲಿದೆ.

ನಾವು ಎಸ್ಮಾ ಜಾರಿಗೊಳಿಸಿದರೂ ಜಗ್ಗಲ್ಲ. ನಮ್ಮ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ನಡೆಸುವುದಾಗಿ ನೌಕರರ ಸಂಘ ಸ್ಪಷ್ಟಪಡಿಸಿದೆ. ಈಗ ಸರ್ಕಾರ ನೌಕರರ ಮನವೊಲಿಸಿ ಪ್ರತಿಭಟನೆ ಹಿಂಪಡೆಯುವಂತೆ ಮಾಡುತ್ತದೆಯೇ ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವಸ್ಥಾನದಲ್ಲಿ ಕೇಸರಿ ಧ್ವಜ ಹಾರಿಸಬಾರದು ಎಂದ ಹೇಳಿಕೆಗೆ ಸ್ಪಷ್ಟನೆ ಕೊಟ್ಟ ರಮಾನಾಥ ರೈ

ಗಂಗಾ ನದಿಗೆ ಓರ್ವ ಹಾಲೆರೆಯುವಾಗ ಕಂಡುಬಂದ ದಯನೀಯ ದೃಶ್ಯವಿದು Video

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ

ಗೋ ಬ್ಯಾಕ್ ಗವರ್ನರ್: ಕಾಂಗ್ರೆಸ್ ನಿಂದ ಅಭಿಯಾನ

Karnataka Weather: ಈ ಬಾರಿ ಬೇಸಿಗೆ ಹೇಗಿರಲಿದೆ, ಹವಾಮಾನ ತಜ್ಞರ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments